ಬೆಂಗಳೂರು: ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ. ಎಲ್. ರಾಹುಲ್ ಅವರ ಪ್ರೇಮ ಸಂಬಂಧಕ್ಕೆ ಮೂರು ವರ್ಷಗಳಾಗುತ್ತಾ ಬಂದಿದೆ. ಅವರು ಇನ್ನೇನು ಮದುವೆಯಾಗುತ್ತಾರೆ ಎಂಬ ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಆಗಾಗ ಕೇಳಿಬರುತ್ತಿರುತ್ತದೆ.
ಅಲ್ಲದೆ, ಸಿನಿಮಾ ಪ್ರಚಾರ ವೇದಿಕೆಗಳಲ್ಲಿ ಕೂಡ ಅತಿಯಾ ಶೆಟ್ಟಿಗೆ ಈ ಪ್ರಶ್ನೆಗಳು ಹಲವು ಬಾರಿ ಎದುರಾಗಿದೆ.
ಈ ಬಾರಿ, ಇನ್ನು ಮೂರೇ ತಿಂಗಳಿನಲ್ಲಿ ಅತಿಯಾ ಶೆಟ್ಟಿ ಮತ್ತು ಕೆ. ಎಲ್. ರಾಹುಲ್ ಅವರ ಮದುವೆ ನಡೆಯಲಿದೆ ಎನ್ನುವ ಸುದ್ದಿ ಕೇಳಿ ಅತಿಯಾ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಮದುವೆಗೆ ನನಗೆ ಆಹ್ವಾನವಿರಬಹುದು ಎಂದುಕೊಂಡಿದ್ದೇನೆ ಎಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.
ಮದುವೆ ಕುರಿತ ಗಾಸಿಪ್ ಮತ್ತೆ ಮತ್ತೆ ಕೇಳಿಬರುತ್ತಿದೆ. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕೆ. ಎಲ್. ರಾಹುಲ್ ಮತ್ತು ಅತಿಯಾ ಶೆಟ್ಟಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.