ಸೋಮವಾರ, ಅಕ್ಟೋಬರ್ 3, 2022
24 °C
ಆರೋಪ ಪಟ್ಟಿಯಲ್ಲಿ ಹೆಸರು ಸೇರಿಸಲು ಇ.ಡಿ ನಿರ್ಧರಿಸಿರುವ ಬೆನ್ನಲ್ಲೇ ಪೋಸ್ಟ್ ಶೇರ್ ಮಾಡಿದ ನಟಿ ಜಾಕ್ವೆಲಿನ್

ಹಣ ಅಕ್ರಮ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಇನ್‌ಸ್ಟಾಗ್ರಾಮ್‌ ಪೋಸ್ಟ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹೊಸದಾಗಿ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿರುವ ಜಾರಿ ನಿರ್ದೇಶನಾಲಯ(ಇ.ಡಿ) ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌ ಹೆಸರು ಸೇರ್ಪಡೆ ಮಾಡಲು ತೀರ್ಮಾನಿಸಿದೆ. ಅದರ ಬೆನ್ನಲ್ಲೇ ನಟಿ ಜಾಕ್ವೆಲಿನ್‌, ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ಡಿಯರ್ ಮಿ ಎಂದು ಸ್ಟೇಟಸ್ ಪೋಸ್ಟ್ ಆರಂಭಿಸಿರುವ ನಟಿ, ನಾನು ಬಲಿಷ್ಠವಾಗಿದ್ದೇನೆ, ಇದನ್ನು ನಾನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗಲಿದೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆ, ಕನಸನ್ನು ನನಸಾಗಿಸುತ್ತೇನೆ, ನನಗದು ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ ₹200 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ₹10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.


ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸ್ಟೋರಿ ಪೋಸ್ಟ್

ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯಡಿ ಇ.ಡಿ ಅಧಿಕಾರಿಗಳು ಏಪ್ರಿಲ್‌ನಲ್ಲಿ ಜಾಕ್ವೆಲಿನ್‌ ಅವರಿಂದ ₹7.7 ಕೋಟಿ ಹಣ ಜಪ್ತಿ ಮಾಡಿದ್ದರು. ಬಳಿಕ ₹15 ಲಕ್ಷವನ್ನೂ ವಶಕ್ಕೆ ಪಡೆದಿದ್ದರು. ಇದು ಅಕ್ರಮ ಆದಾಯ ಎಂದೂ ತಿಳಿಸಿದ್ದರು.

ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ವಿರುದ್ಧ ಇ.ಡಿಯಿಂದ ಲುಕ್ ಔಟ್ ನೋಟಿಸ್ ಜಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು