ಗುರುವಾರ , ಆಗಸ್ಟ್ 5, 2021
28 °C

ವೆಬ್‌ ಸೀರಿಸ್: ಬ್ರೀತ್ ಇನ್ ಟು ಶ್ಯಾಡೊಸ್‌ನಲ್ಲಿ ಅಭಿಷೇಕ್ ಬಚ್ಚನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್ ಖ್ಯಾತ ನಟ ಅಭಿಷೇಕ್ ಬಚ್ಚನ್ ಡಿಜಿಟಲ್ ಮಾಧ್ಯಮಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ವೆಬ್ ಸರಣಿ 'ಬ್ರೀತ್ ಇನ್ ಟು ಶ್ಯಾಡೊಸ್‌' ಶೀಘ್ರದಲ್ಲೇ ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಪ್ರಸಾರವಾಗಲಿದೆ.

ಇದರ ಫಸ್ಟ್‌ಲುಕ್‌ ಪೋಸ್ಟರ್ ಬಿಡುಗಡೆಯಾಗಿದ್ದು ಅದನ್ನು ಅಭಿಷೇಕ್ ಬಚ್ಚನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಲಾಕ್‌ಡೌನ್‌ ಬಳಿಕ ವೆಬ್ ಸೀರಿಸ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಾಲಿವುಡ್‌ ಸೇರಿದಂತೆ ದಕ್ಷಿಣ ಭಾರತದ ಹಲವು ನಟ ನಟಿಯರು ವೆಬ್ ಸೀರಿಸ್‌ಗಳತ್ತ ಮುಖ ಮಾಡಿದ್ದಾರೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸಿಇಒ ವಿಕ್ರಮ್ ಮಲ್ಹೋತ್ರಾ ಹೇಳಿದ್ದಾರೆ.

'ಬ್ರೀತ್ ಇನ್ ಟು ಶ್ಯಾಡೋಸ್'ನಲ್ಲಿ ಅಮಿತ್ ಸಾದ್, ನಿತ್ಯಾ ಮೆನನ್ ಮತ್ತು ಸಯಾಮಿ ಖೇರ್ ನಟಿಸಿದ್ದಾರೆ. ಜುಲೈ 10 ರಿಂದ ಅಮೆಜಾನ್ ಪ್ರೈಮ್ ವೀಡಿಯೋದಲ್ಲಿ ಪ್ರಸಾರವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು