ಶನಿವಾರ, ಮೇ 21, 2022
23 °C

‘ಶ್ರೀವಲ್ಲಿ’ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಡೇವಿಡ್ ವಾರ್ನರ್: ಅಭಿಮಾನಿಗಳು ಫಿದಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಸ್ಟ್ರೇಲಿಯಾದ ಕ್ರಿಕೆಟ್​ ಆಟಗಾರ ಡೇವಿಡ್​ ವಾರ್ನರ್​ ಅವರು ಐಪಿಎಲ್‌ ಟೂರ್ನಿಯ ಮೂಲಕ ಭಾರತದೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದಾರೆ.  

ಐಪಿಎಲ್​ನಲ್ಲಿ ಹೈದರಾಬಾದ್ ತಂಡದ ಪರ ಆಡುತ್ತಿದ್ದ ಅವರು, ಇಲ್ಲಿನ ಕ್ರಿಕೆಟ್‌ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.  

ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ವಾರ್ನರ್, ಕನ್ನಡ, ತೆಲುಗು, ಹಿಂದಿ ಹಾಡುಗಳಿಗೆ ರೀಲ್ಸ್​ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ‘ಪುಷ್ಪ’ ಸಿನಿಮಾದ ‘ಶ್ರೀವಲ್ಲಿ..’ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ್ದು, ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಈ ಹೊಸ ರೀಲ್ಸ್​ ಸಖತ್‌ ವೈರಲ್​ ಆಗುತ್ತಿದ್ದು, ಇದುವರೆಗೆ 14.28 ಲಕ್ಷ ಮಂದಿ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

‘ಪುಷ್ಪ’ ಸಿನಿಮಾದ ‘ಶ್ರೀವಲ್ಲಿ..’ ಹಾಡು ಹೆಚ್ಚು ಖಾತ್ಯಿ ಗಳಿಸಿದೆ. ಅನೇಕರು ನಟ ಅಲ್ಲು ಅರ್ಜುನ್​ ಅವರು ಮಾಡಿದ ಡ್ಯಾನ್ಸ್‌ ಅನ್ನು ಅನುಕರಿಸಿ ರೀಲ್ಸ್‌ ಮಾಡುತ್ತಿದ್ದಾರೆ.

‘ನಿಮ್ಮ ಕನ್ನಡಾಭಿಮಾನಕ್ಕೆ ಧನ್ಯವಾದ’ ಎಂದು ಅನೇಕರು ಕಾಮೆಂಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು