ಗುರುವಾರ , ಮಾರ್ಚ್ 23, 2023
31 °C

ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಮಿಸ್ಟರ್‌ ಇಂಡಿಯಾ ಮನೋಜ್‌ ಪಾಟೀಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಾಜಿ ಮಿಸ್ಟರ್‌ ಇಂಡಿಯಾ ಮನೋಜ್‌ ಪಾಟೀಲ್‌ ಆತ್ಮಹತ್ಯೆಗೆ ಯತ್ನಿಸಿದ್ದು ಇಲ್ಲಿನ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಬೆಳಗ್ಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರು ಕೂಪರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ನಟ ಸಾಹೀಲ್‌ ಖಾನ್‌ ಅವರ ಕಿರುಕುಳದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದು ಮರಣ ಪತ್ರ ಬರೆದಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೋಜ್‌ ಅವರು 2016ರಲ್ಲಿ ಮಿಸ್ಟರ್‌ ಇಂಡಿಯಾ ಸ್ಪರ್ಧೆಯಲ್ಲಿ ಗೆಲುವು ದಾಖಲಿಸಿದ್ದರು. 

ಸದ್ಯ ಅವರು ಮಾಡೆಲ್‌ ಆಗಿ ಕೆಲಸ ಮಾಡುವುದರ ಜತೆಗೆ ಫಿಟ್‌ನೆಸ್‌ ತರಬೇತಿ ಶಾಲೆಯನ್ನು ನಡೆಸುತ್ತಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು