ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲನಚಿತ್ರೋತ್ಸವ ಸ್ಪರ್ಧಾತ್ಮಕ ವಿಭಾಗಕ್ಕೆ ಸಿನಿಮಾಗಳನ್ನ ಸಲ್ಲಿಸುವ ಅವಧಿ ವಿಸ್ತರಣೆ

Last Updated 31 ಡಿಸೆಂಬರ್ 2021, 4:50 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 13ನೇ ಆವೃತ್ತಿಯು ಫೆಬ್ರುವರಿಯಲ್ಲಿ ನಡೆಯಲಿದ್ದು, ಸ್ಪರ್ಧಾತ್ಮಕ ವಿಭಾಗಕ್ಕೆ ಚಲನಚಿತ್ರಗಳನ್ನು ಸಲ್ಲಿಸುವ ಕಡೆಯ ದಿನಾಂಕವನ್ನು 2022ರ ಜ.8ರವರೆಗೆ ವಿಸ್ತರಿಸಲಾಗಿದೆ.

‘ಏಷಿಯನ್‌, ಭಾರತೀಯ ಹಾಗೂ ಕನ್ನಡದ ಎಲ್ಲ ಉಪಭಾಷಾ ಚಲನಚಿತ್ರಗಳೂ ಸೇರಿದಂತೆ ಕನ್ನಡ ಸಿನಿಮಾಗಳು ಸ್ಪರ್ಧಾತ್ಮಕ ವಿಭಾಗದಲ್ಲಿರುತ್ತವೆ. ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ. 2021ರ ಜ.1ರಿಂದ 2021ರ ಡಿ.31ರವರೆಗೆಸೆನ್ಸಾರ್‌ ಆದ ಸಿನಿಮಾಗಳನ್ನು ಪರಿಗಣಿಸಲಾಗುವುದು’ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್‌ ಪುರಾಣಿಕ್‌ ತಿಳಿಸಿದ್ದಾರೆ.

ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬೇಕಾದ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು www.biffes.orgನಿಂದ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT