ಶನಿವಾರ, ಸೆಪ್ಟೆಂಬರ್ 18, 2021
30 °C

ಒಟಿಟಿಯಲ್ಲಿ ಹಿಂದಿಯ ಬಿಗ್‌ ಬಾಸ್‌: ಹೋಸ್ಟ್‌ ಮಾಡಲಿದ್ದಾರೆ ಕರಣ್‌ ಜೋಹರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಹಿಂದಿ ಕಿರುತೆರೆಯ ಬಹು ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ ಬಾಸ್' ಒಟಿಟಿಯಲ್ಲಿ ಪ್ರಸಾರಗೊಳ್ಳಲಿದೆ.

ಬಾಲಿವುಡ್‌ನ ಖ್ಯಾತ ನಿರ್ದೇಶಕ ಕರಣ್‌ ಜೋಹರ್‌ ಅವರು ಒಟಿಟಿಯಲ್ಲಿ ಪ್ರಸಾರಗೊಳ್ಳುವ ಬಿಗ್‌ ಬಾಸ್‌ ಶೋ ನಡೆಸಿಕೊಡಲಿದ್ದಾರೆ.

ಕಲರ್ಸ್‌ ಟಿವಿಯಲ್ಲಿ ಪ್ರಸಾರವಾಗುವ ಬಿಗ್‌ ಬಾಸ್‌ ಹೋಸ್ಟ್‌ ಆಗಿ ಸಲ್ಮಾನ್‌ ಖಾನ್‌ ಅವರೇ ಮುಂದುವರೆಯಲಿದ್ದಾರೆ.

'ವೂಟ್‌' ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುವ ಬಿಗ್‌ ಬಾಸ್‌ ಅನ್ನು ತಾವು ಹೋಸ್ಟ್‌ ಮಾಡುವುದಾಗಿ ಕರಣ್‌ ಜೋಹರ್‌ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ‘ರಾಕಿ ಔರ್‌ ರಾಣಿ ಕಿ ಪ್ರೇಮ್‌ ಕಹಾನಿ’ ಚಿತ್ರವನ್ನು ಕರಣ್‌ ಜೋಹರ್‌ ನಿರ್ದೇಶಿಸುತ್ತಿದ್ದಾರೆ. ರಣವೀರ್‌ ಸಿಂಗ್‌ – ಆಲಿಯಾ ಭಟ್‌ ಮುಖ್ಯ ಭೂಮಿಕೆಯಲ್ಲಿ ಇರಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು