ರಾಧಿಕಾ ಪಂಡಿತ್ ಜತೆ ವಿದೇಶ ಪ್ರವಾಸದಲ್ಲಿ ಕೆಜಿಎಫ್ ಸ್ಟಾರ್ ಯಶ್
ಬೆಂಗಳೂರು: ಕೆಜಿಎಫ್ ಚಿತ್ರದ ಯಶಸ್ಸಿನ ಬಳಿಕ ಯಶ್ ಗೋವಾ ಪ್ರವಾಸಕ್ಕೆ ಹೋಗಿ ಬಂದಿದ್ದರು. ಈ ಬಾರಿ ಪತ್ನಿ ರಾಧಿಕಾ ಪಂಡಿತ್ ಜತೆ ವಿದೇಶ ಪ್ರವಾಸಕ್ಕೆ ಹೋಗಿ, ಅಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದಾರೆ.
ನಟಿ ಮತ್ತು ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ವಿದೇಶ ಪ್ರವಾಸದ ಸುಂದರ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ.
ಪತ್ನಿ ಜತೆ ವಿದೇಶ ಪ್ರವಾಸ, ಶಾಪಿಂಗ್‌ನ ಕ್ಷಣಗಳನ್ನು ನಟ ಯಶ್ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಸ್ಯಾಹಾರಕ್ಕಾಗಿ ಇಟಲಿಯಲ್ಲಿ ಅಲೆದಾಡಿದ ಮೀರಾ ರಜಪೂತ್!
ಕನ್ನಡ ಚಿತ್ರರಂಗದಲ್ಲಿ ಸ್ಟೈಲಿಶ್ ಜೋಡಿ ಎಂದೇ ಕರೆಸಿಕೊಳ್ಳುವ ಯಶ್ ಮತ್ತು ರಾಧಿಕಾ, ಪ್ರವಾಸಿ ತಾಣದಲ್ಲಿ ವಿವಿಧ ಪೋಸ್ ನೀಡುವ ಮೂಲಕ ಫೋಟೊ ತೆಗೆಸಿಕೊಂಡಿದ್ದಾರೆ.
ಮಾಲ್ಡೀವ್ಸ್ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಯುಕ್ತಾ ಹೊರನಾಡು
2016ರಲ್ಲಿ ಯಶ್ ಮತ್ತು ರಾಧಿಕಾ ಮದುವೆಯಾಗಿದ್ದು, ಅವರಿಗೆ ಐರಾ ಮತ್ತು ಯಥರ್ವ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಮಗಳ ಹುಟ್ಟುಹಬ್ಬಕ್ಕೆ ಶುಭಕೋರಿದ ಗೋಲ್ಡನ್ ಸ್ಟಾರ್ ಗಣೇಶ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.