ಬುಧವಾರ, ಜೂನ್ 29, 2022
25 °C

ಪ್ರಭಾಸ್ ಜತೆ ಹೊಂದಾಣಿಕೆಯಿಲ್ಲ: ಪೂಜಾ ಹೆಗ್ಡೆ ಸ್ಪಷ್ಟನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Pooja Hegde Instagram Post

ಬೆಂಗಳೂರು: ರಾಧೇ ಶ್ಯಾಮ್ ಚಿತ್ರದಲ್ಲಿ ಜತೆಯಾಗಿ ನಟಿಸಿರುವ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅವರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಹಲವು ಬಾರಿ ಕೇಳಿಬಂದಿತ್ತು.

ಆದರೆ, ಈ ಬಗ್ಗೆ ಹೇಳಿಕೆ ನೀಡಿರುವ ನಟಿ ಪೂಜಾ ಹೆಗ್ಡೆ, ಸತ್ಯಕ್ಕೆ ದೂರವಾದ ಮಾತುಗಳನ್ನು ನಾನು ಕೇಳಿಸಿಕೊಳ್ಳುವುದಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ, ನಾನು ಏನಿದ್ದರೂ ಧನಾತ್ಮಕ ಚಿಂತನೆ ಮತ್ತು ನನ್ನ ವೃತ್ತಿಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಲಿವುಡ್ ಬಬಲ್‌ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಜನರು ಗಾಸಿಪ್ ಮಾಡಲು ಮತ್ತು ಕೇಳಲು ಇಷ್ಟಪಡುತ್ತಾರೆ. ಆದರೆ ಅದು ಹೆಚ್ಚು ಸಮಯ ಉಳಿಯುವುದಿಲ್ಲ. ನಾನು ನನ್ನ ಜೀವನದಲ್ಲಿ ಉತ್ತಮ ವಿಚಾರಗಳಿಗೆ ಮಾತ್ರ ಪ್ರಾಶಸ್ಯ್ತ ನೀಡುತ್ತೇನೆ ಎಂದು ಹೇಳಿದ್ದಾರೆ.

ರಾಧೇ ಶ್ಯಾಮ್ ಚಿತ್ರದ ಚಿತ್ರೀಕರಣ ಮತ್ತು ಪ್ರಚಾರ ಕೆಲಸದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಇಬ್ಬರೂ ಸರಿಯಾಗಿ ತೊಡಗಿಸಿಕೊಳ್ಳುತ್ತಿಲ್ಲ. ಅವರಿಬ್ಬರಿಗೂ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಮಾತುಗಳು ಬಾಲಿವುಡ್ ಅಂಗಳದಲ್ಲಿ ಕೇಳಿಬಂದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು