ಸೋಮವಾರ, ಆಗಸ್ಟ್ 2, 2021
26 °C

ಅಸ್ಸಾಂನ ದೇಗುಲಕ್ಕೆ ಭೇಟಿ ನೀಡಿದ ಸೈಫ್ ಅಲಿ ಖಾನ್ ಮಗಳು..

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Sara Ali Khan Instagram Post

ಬೆಂಗಳೂರು: ನಟ ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್ ಅಸ್ಸಾಂನ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ನಟಿ ಸಾರಾ, ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮನಸ್ಸಿಗೆ ನೆಮ್ಮದಿ ಲಭಿಸಿತು. ಆಶೀರ್ವಾದವೂ ಲಭಿಸಿತು ಎಂದು ಹೇಳಿಕೊಂಡಿದ್ದಾರೆ.

ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರಾ, ಅಲ್ಲಿನ ಸಾಂಪ್ರದಾಯಿಕ ‘ಅಸ್ಸಾಮೀ ಗಮೋಸಾ’ ಶಾಲು ಜತೆಗೆ ಹಣೆಗೆ ತಿಲಕ ಕೂಡ ಇರಿಸಿದ್ದರು. ಅಲ್ಲದೆ, ಶ್ವೇತವರ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

ಸಾರಾ ಜತೆಗೆ ಆಕೆಯ ಗೆಳತಿಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಸಾರಾ ಪೋಸ್ಟ್‌ಗೆ 15 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದ್ದು, ಅಭಿಮಾನಿಗಳು ನಟಿಯ ನಡೆಯನ್ನು ಶ್ಲಾಘಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು