ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಲಗ’ ಸಿದ್ದಿಯಿಂದ ಸಿದ್ದರಾಮಯ್ಯ ಹಾಡು!

Last Updated 1 ಆಗಸ್ಟ್ 2022, 8:31 IST
ಅಕ್ಷರ ಗಾತ್ರ

‘ಸಲಗ’ ಸಿನಿಮಾದಲ್ಲಿ ‘ಟಿಣಿಂಗ ಮಿಣಿಂಗ ಟಿಶ್ಯಾ’ ಎಂಬ ಹಾಡಿಗೆ ಧ್ವನಿಯಾಗಿ ಖ್ಯಾತಿಪಡೆದಿದ್ದ ಗಿರಿಜಾ ಸಿದ್ದಿ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತ ‘ಮೈಸೂರು ಹುಲಿಯಾ’ ಎಂಬ ಹಾಡು ಹಾಡಿದ್ದಾರೆ.

ಎಪ್ಪತ್ತೈದರ ವಸಂತಕ್ಕೆ ಕಾಲಿಟ್ಟಿರುವ ಸಿದ್ದರಾಮಯ್ಯ ಜನ್ಮದಿನದಂದು ಈ ಹಾಡು ಬಿಡುಗಡೆಯಾಗಲಿದೆ. ‘ಸಲಗ’ ಚಿತ್ರದ ಬಳಿಕ ಮನೆಮಾತಾಗಿದ್ದ ಗಿರಿಜಾ ಇದೇ ಮೊದಲ ಬಾರಿಗೆ ಜನಪದ ಶೈಲಿಯಲ್ಲಿ ಈ ಹಾಡು ಹಾಡಿದ್ದು, ಸಂಗೀತ ನಿರ್ದೇಶಕ ವೀರ್ ಸಮರ್ಥ್ ಈ ಹಾಡಿಗೆ ಸಂಗೀತ ನೀಡಿದ್ದು, ಸಿನಿಮಾ ಶೈಲಿಯಲ್ಲಿ ಹಾಡು ಮೂಡಿಬಂದಿದೆ. ಸಿದ್ದರಾಮಯ್ಯ ಅವರ ಜೀವನ ಸಾಧನೆಯ ವರ್ಣನೆ ಹೊಂದಿರುವ ಈ ಹಾಡಿಗೆ ‘ಜೇಮ್ಸ್’ ಸಿನಿಮಾ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ‘ಕೈ ಹಿಡಿಯೋ ಕೈ ಸಿದ್ದರಾಮಯ್ಯ’ ಎನ್ನುತ್ತ ಆರಂಭವಾಗುವ ಈ ಹಾಡನ್ನು ಸಿದ್ದರಾಮಯ್ಯ ಅವರ ಆಪ್ತರೂ ಆಗಿರುವ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿರ್ಮಾಣ ಮಾಡಿದ್ದಾರೆ.

ಈ ಹಾಡಿನ ಜೊತೆಗೆ ಇದೇ ಆಗಸ್ಟ್ 3ರಂದು ಇನ್ನೊಂದು ಹಾಡು ಬಿಡುಗಡೆ ಆಗಲಿದ್ದು, ಅದನ್ನು ‘ಚುಟುಚುಟು ಅಂತೈತಿ’ ಖ್ಯಾತಿಯ ರವೀಂದ್ರ ಸೊರಗಾವಿ ಹಾಡಿದ್ದಾರೆ. ಹರ್ಷ ವರ್ಧನ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಇದಕ್ಕೂ ಚೇತನ್ ಕುಮಾರ್ ಅವರ ಸಾಹಿತ್ಯವಿದೆ. ಈ ಎರಡೂ ಲಿರಿಕಲ್ ವಿಡಿಯೊ ಹಾಡುಗಳು A2 ಎಂಟರ್‌ಟೈನ್‌ಮೆಂಟ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ. ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ ಜನ್ಮದಿನದ ಸಮಾರಂಭ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಅದೇ ದಿನ ಈ ಹಾಡುಗಳು ಲೋಕಾರ್ಪಣೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT