ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕ ಸೋನು ನಿಗಮ್ ಮತ್ತು ಕುಟುಂಬಸ್ಥರಿಗೆ ಕೋವಿಡ್ ಸೋಂಕು ದೃಢ

Last Updated 5 ಜನವರಿ 2022, 5:20 IST
ಅಕ್ಷರ ಗಾತ್ರ

ನವದೆಹಲಿ: ಖ್ಯಾತ ಗಾಯಕ ಸೋನು ನಿಗಮ್‌ ಮತ್ತು ಕುಟುಂಬಸ್ಥರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ನಾನು ಸೇರಿದಂತೆ ಪತ್ನಿ ಮಧುರಿಮಾ ಮತ್ತು ಪುತ್ರ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಸದ್ಯ ನಾವು ದುಬೈನಲ್ಲಿ ಇದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ಸೂಪರ್ ಸಿಂಗರ್ ಸೀಸನ್ –3 ಕಾರ್ಯಕ್ರಮದ ಅಂಗವಾಗಿ ಶೂಟಿಂಗ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬರಬೇಕಾಗಿತ್ತು. ಆದರೆ, ಕೋವಿಡ್ ಪರೀಕ್ಷೆಯ ವರದಿ ಪಾಸಿಟಿವ್‌ ಬಂದಿದ್ದು, ಸದ್ಯ ಪ್ರತ್ಯೇಕವಾಸದಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆ ವೇಗವಾಗಿ ಹರಡುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಮನವಿ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಚಿತ್ರಮಂದಿರಗಳ ಮಾಲೀಕರು ಮತ್ತು ಚಿತ್ರ ನಿರ್ಮಾಪಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಒಳ್ಳೆಯ ದಿನಗಳು ಮರುಕಳಿಸಲಿವೆ ಎಂಬ ಭರವಸೆ ಇರಲಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT