ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9,99,999ನೇ ಬಾರಿ ಕೋವಿಡ್ ಪರೀಕ್ಷೆ: ಸೋನು ನಿಗಮ್ ಪೋಸ್ಟ್ ವೈರಲ್!

Last Updated 24 ನವೆಂಬರ್ 2021, 9:39 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕೋವಿಡ್ ಸಮಸ್ಯೆ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಅದರಲ್ಲೂ ವಿದೇಶ ಪ್ರಯಾಣಕ್ಕೆ ಅನುಮತಿ ಪಡೆಯಲು ಕೋವಿಡ್ ಟೆಸ್ಟ್‌ನಂತಹ ವಿವಿಧ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ.

ಈ ರೀತಿ ಹಲವು ಬಾರಿ ಕೋವಿಡ್ ಟೆಸ್ಟ್‌ಗೆ ಒಳಗಾಗಿರುವ ಗಾಯಕ ಸೋನು ನಿಗಮ್, ನಾನು 9,99,999 ಬಾರಿ ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದೇನೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಆರ್‌ಟಿಪಿಸಿಆರ್ ಟೆಸ್ಟ್ ಸಂದರ್ಭದಲ್ಲಿ ಹಲವು ಬಾರಿ ನೋವು ಅನುಭವಿಸಿದ್ದೇನೆ ಎಂದು ಸೋನು ನಿಗಮ್ ಹೇಳಿಕೊಂಡಿದ್ದು, ಆರೋಗ್ಯ ಕಾರ್ಯಕರ್ತೆಯೊಬ್ಬರು ಕೋವಿಡ್ ಟೆಸ್ಟ್ ಮಾಡುತ್ತಿರುವ ವಿಡಿಯೊ ಹಂಚಿಕೊಂಡಿದ್ದಾರೆ.

ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಸೋನು ನಿಗಮ್ ಅವರು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಸಾಮಾಜಿಕ ತಾಣಗಳ ಮೂಲಕ ವಿವಿಧ ಮಾಹಿತಿಯನ್ನು ಜನರೊಂದಿಗೆ ಸೋನು ನಿಗಮ್ ಅವರು ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT