ಗೆಳೆಯನ ಜತೆ ಕಾರಿನಲ್ಲಿ ತೆರಳಿದ ಸುಹಾನಾ ಖಾನ್: ಫೋಟೊ ವೈರಲ್

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ಗೌರಿ ಖಾನ್ ದಂಪತಿ ಪುತ್ರಿ ಸುಹಾನಾ ಖಾನ್, ಸಾಮಾಜಿಕ ತಾಣಗಳಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
ಬಾಲಿವುಡ್ನ ಸ್ಟಾರ್ ಕುಟುಂಬದ ಹಿನ್ನೆಲೆಯೂ ಇರುವುದರಿಂದ, ಅವರ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಿದೆ.
ಸುಹಾನಾ ಖಾನ್ ಅವರು ನ್ಯೂಯಾರ್ಕ್ ಮತ್ತು ಲಂಡನ್ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದು, ಸಿನಿಮಾ ಪ್ರವೇಶಕ್ಕೆ ತಯಾರಿ ನಡೆಸುತ್ತಿದ್ದಾರೆ.
ಅವರು ಗೆಳೆಯನೊಬ್ಬನ ಜತೆ ಹೊರಗಡೆ ಸುತ್ತಾಡಲು ಕಾರಿನಲ್ಲಿ ತೆರಳಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಅವರ ಫೋಟೊ ಕ್ಲಿಕ್ಕಿಸಿ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಆದರೆ, ಕ್ಯಾಮೆರಾ ಕಂಡ ಕೂಡಲೇ, ಸುಹಾನಾ ಮತ್ತು ಅವರ ಗೆಳೆಯ ಮುಖಕ್ಕೆ ಕೈ ಅಡ್ಡ ಹಿಡಿದುಕೊಂಡಿದ್ದಾರೆ. ಅವರ ಫೋಟೊಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಮತ್ಸ್ಯಕನ್ಯೆ ಅವತಾರದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ
ವೈರಲ್ ಭಯಾನಿ ಅವರು ಫೋಟೊಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.