ಗುರುವಾರ , ಜನವರಿ 27, 2022
21 °C

ವಮಿಕಾಗೆ ಮೊದಲ ಹುಟ್ಟುಹಬ್ಬ ಸಂಭ್ರಮ: ಅನುಷ್ಕಾ–ಕೊಹ್ಲಿ ಅಭಿಮಾನಿಗಳಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಹಾಗೂ ಭಾರತ ಟೆಸ್ಟ್ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮಗಳು ‘ವಮಿಕಾ’ ಇಂದು (ಜ.11) ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
 
‘ವಮಿಕಾ’ ಹುಟ್ಟುಹಬ್ಬದ ಅಂಗವಾಗಿ ಅನುಷ್ಕಾ – ಕೊಹ್ಲಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಹುಟ್ಟುಹಬ್ಬದ ಶುಭಾಶಯಗಳು ಬೇಬಿ ವಮಿ! ಲೆಕ್ಕವಿಲ್ಲದಷ್ಟು ಪ್ರೀತಿ, ಅಪ್ಪುಗೆಗಳು ಮತ್ತು ಸಂತೋಷದೊಂದಿಗೆ ನಿನಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕಳುಹಿಸುತ್ತಿದ್ದೇನೆ. ಮೊದಲನೇ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮ್ಮನ್ನು ಆಶೀರ್ವದಿಸಲಿ’ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ.

‘ಇಂದು ಮತ್ತು ಜೀವನದುದ್ದಕ್ಕೂ ನಿನಗೆ (ವಮಿಕಾ) ಶಾಂತಿ ಮತ್ತು ಸಂತೋಷವನ್ನು ದೇವರ ಕರುಣಿಸಲಿ ಎಂದು ಬಯಸುತ್ತೇನೆ. ಜನ್ಮದಿನದ ಶುಭಾಶಯಗಳು ವಮಿಕಾ ಕೊಹ್ಲಿ’ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

‘ನಮ್ಮ ವಿರುಷ್ಕಾ ಜಗತ್ತನ್ನು ಪೂರ್ಣಗೊಳಿಸಿದ ನಮ್ಮ ಮುದ್ದಾದ ಪುಟ್ಟ ದೇವತೆ ‘ವಮಿಕಾ’ಗೆ ಜನ್ಮದಿನದ ಶುಭಾಶಯಗಳು. ರಾಜಕುಮಾರಿ ನಾವು ನಿನ್ನನ್ನು ಪ್ರೀತಿಸುತ್ತೇವೆ’ ಮತ್ತೊಬ್ಬ ಅಭಿಮಾನಿ ಟ್ವೀಟ್ ಮಾಡಿದ್ದಾರೆ.

ಸದ್ಯ ವಿರಾಟ್‌ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು