ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WATCH: ಹತ್ತು ರೂಪಾಯಿಗೆ ಸ್ವರ್ಗ ತೋರಿಸಲು ಬಂದ ಚಂದನ್‌ ಶೆಟ್ಟಿ, ರಚಿತಾ ರಾಮ್‌

Last Updated 30 ಡಿಸೆಂಬರ್ 2021, 12:11 IST
ಅಕ್ಷರ ಗಾತ್ರ

ರ‍್ಯಾಪ್‌ ಹಾಡುಗಳ ಮೂಲಕ ಯುವ ಹೃದಯಗಳಿಗೆ ಲಗ್ಗೆ ಹಾಕುವ ಗಾಯಕ, ಸಂಗೀತ ನಿರ್ದೇಶಕ ಚಂದನ್‌ ಶೆಟ್ಟಿ ಈಗ ಹೊಸತೊಂದು ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ.

ನೂತನ ವರ್ಷ(2022) ಸ್ವಾಗತಿಸುವ ಸಂದರ್ಭದಲ್ಲಿ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಯುಟ್ಯೂಬ್‌ನಲ್ಲಿ ಹಾಡು ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ಚಂದನವನದ ನಟಿ ರಚಿತಾ ರಾಮ್‌ ಈ ಹಾಡಿನಲ್ಲಿ ಚಂದನ್‌ ಶೆಟ್ಟಿ ಜತೆಗೆ ಹೆಜ್ಜೆ ಹಾಕಿರುವುದು ವಿಶೇಷವಾಗಿದೆ. ಈ ಜೋಡಿ ಅಭಿಮಾನಿಗಳಿಗೆ ಕೇವಲ ₹10ಗಳಲ್ಲಿ ಸ್ವರ್ಗ ತೋರಿಸಲು ಮುಂದಾಗಿದೆ!

ವಿಡಿಯೊ ಸಾಂಗ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 18.5ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿರುವುದು ವಿಶೇಷ. ಹಾಡಿನಲ್ಲಿ ಬಾಲ ಕಲಾವಿದೆಬಿಂದ್ಯಾ ಕೆ. ಗೌಡ, ರಚಿತಾ ರಾಮ್‌, ಚಂದನ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಈ ಮ್ಯೂಸಿಕ್​ ವಿಡಿಯೊವನ್ನು ಆರ್​. ಕೇಶವ್​ ನಿರ್ಮಾಣ ಮಾಡಿದ್ದಾರೆ. ಶೇಖರ್​ ಚಂದ್ರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್​ ಸಂಕಲನ, ಮುರಳಿ ಮಾಸ್ಟರ್​ ನೃತ್ಯ ನಿರ್ದೇಶನ, ಮೋಹನ್​ ಬಿ. ಕೆರೆ ಕಲಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕ ನಂದಕಿಶೋರ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT