ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭಾಸ್‌ ನಟನೆಯ ‘ಆದಿಪುರುಷ’ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಹಿಂದೂ ಸೇನೆ ಅರ್ಜಿ

Published 17 ಜೂನ್ 2023, 6:18 IST
Last Updated 17 ಜೂನ್ 2023, 6:18 IST
ಅಕ್ಷರ ಗಾತ್ರ

ನವದೆಹಲಿ: 'ಆದಿಪುರುಷ್‌' ಚಿತ್ರದ ಸಾರ್ವಜನಿಕ ಪ್ರದರ್ಶನಕ್ಕೆ ಪ್ರಮಾಣಪತ್ರ ನೀಡಬಾರದು ಎಂದು ಮನವಿ ಮಾಡಿ ಹಿಂದೂ ಸೇನೆ ದೆಹಲಿ ಹೈಕೋರ್ಟ್‌ನಲ್ಲಿ ಶುಕ್ರವಾರ ಅರ್ಜಿ ಸಲ್ಲಿಸಿದೆ.

ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಈ ಸಂಬಂಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.

‘ಧಾರ್ಮಿಕ ನಾಯಕರು/ಪಾತ್ರಗಳು/ಆಕೃತಿಗಳನ್ನು ಕೆಟ್ಟದಾಗಿ ಬಿಂಬಿಸಿರುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು‘ ಎಂದು ಅರ್ಜಿಯಲ್ಲಿ ಕೋರಲಾಗಿದೆ.

‘ಧಾರ್ಮಿಕ ಪಾತ್ರಗಳ ಕೇಶವಿನ್ಯಾಸ, ಗಡ್ಡ ಮತ್ತು ವಸ್ತ್ರದ ಬಗ್ಗೆ ಮಹಾಕಾವ್ಯಗಳಲ್ಲಿ ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. ಆದರೆ, ಚಿತ್ರದಲ್ಲಿ ಅದಕ್ಕೆ ವಿರುದ್ಧವಾಗಿ ಬಿಂಬಿಸಲಾಗಿದೆ‘ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆದಿಪುರಷ್‌ ಚಿತ್ರವನ್ನು ಓಂ ರಾವುತ್ ಅವರು ನಿರ್ದೇಶಿಸಿದ್ದಾರೆ. ಭೂಷಣ್ ಕುಮಾರ್ ನಿರ್ಮಿಸಿರುವ ಈ ಸಿನಿಮಾ ಹಿಂದೂ ಮಹಾಕಾವ್ಯ ರಾಮಾಯಣವನ್ನು ಆಧರಿಸಿದೆ. ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಮತ್ತು ಸನ್ನಿ ಸಿಂಗ್ ಲಕ್ಷ್ಮಣನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT