ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಕ್ಕೆ ‘2.0’ ಡಬ್!

Last Updated 19 ನವೆಂಬರ್ 2018, 19:45 IST
ಅಕ್ಷರ ಗಾತ್ರ

ನಟ ರಜನೀಕಾಂತ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘2.0’. ಈ ಸಿನಿಮಾವು ಇದೇ 29ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ಬಿಡುಗಡೆಯ ದಿನ ಸಮೀಪಿಸುತ್ತಿದ್ದಂತೆ ಸಿನಿಮಾದ ಬಗ್ಗೆ ಹೊಸ ವಿಚಾರಗಳು ಬಹಿರಂಗವಾಗುತ್ತಿವೆ. ಈ ಸಾಲಿಗೆ, ‘2.0’ ಕನ್ನಡಕ್ಕೂ ಡಬ್ ಆಗಲಿದೆ ಎಂಬ ಮಾತೊಂದು ಹೊಸದಾಗಿ ಸೇರಿದ್ದು, ಇದು ಗಾಂಧಿನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಡಬ್ಬಿಂಗ್ ಸಂಬಂಧ ರಾಜ್ಯದಲ್ಲಿ ಪರ ವಿರೋಧದ ಚರ್ಚೆಗಳು ಇನ್ನೂ ನಡೆಯುತ್ತಲೇ ಇವೆ. ಚಿತ್ರರಂಗದ ಬಹುತೇಕರು ಡಬ್ಬಿಂಗ್‌ಗೆ ವಿರೋಧ ವ್ಯಕ್ತಪಡಿಸಿದರೆ, ಕೆಲವೇ ಮಂದಿ ಪರವಾಗಿ ನಿಂತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ‘2.0’ ಕನ್ನಡದಲ್ಲಿ ತೆರೆಗೆ ಬರಲಿದೆ ಎಂಬ ಮಾತು ಡಬ್ಬಿಂಗ್ ಪರ ಇರುವವರಿಗೆ ಖುಷಿಕೊಟ್ಟರೆ, ವಿರೋಧಿಗಳ ನಿದ್ದೆಗೆಡಿಸಿದೆ.

ರಾಜ್ಯದಲ್ಲಿ ನಂದಿನಿ ಎಂಟರ್‌ಟೈನ್‌ಮೆಂಟ್ ಎಂಬ ಸಂಸ್ಥೆ ಈ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಲು ಮುಂದಾಗಿದ್ದು, ಈ ಸಂಬಂಧ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆಯಂತೆ. ಈ ಮಾಹಿತಿ ಎಷ್ಟರ ಮಟ್ಟಿಗೆ ಸತ್ಯ ಎಂಬುದು ಚಿತ್ರದ ಬಿಡುಗಡೆಯಂದೇ ಗೊತ್ತಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT