‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ ಸಂಜನಾ, ಕನ್ನಡ ಸೇರಿದಂತೆ ತೆಲುಗು, ತಮಿಳಿನ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿ ಪಯಣ ಆರಂಭದಿಂದಲೂ ವೈಯಕ್ತಿಕ ಜೀವನದ ಬಗ್ಗೆ ಎಲ್ಲಿಯೂ, ಯಾವ ವಿಷಯವನ್ನೂ ಹಂಚಿಕೊಂಡಿರಲಿಲ್ಲ.
ನಿಕ್ಕಿ –ಆದಿ ಮದುವೆ ನಟಿ ನಿಕ್ಕಿ ಗಲ್ರಾನಿ ಅವರು ತೆಲುಗು ನಟ ಆದಿ ಪಿನಿಶೆಟ್ಟಿ ಅವರನ್ನು ಮದುವೆಯಾಗಿದ್ದಾರೆ. ಅದ್ದೂರಿ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಬುಧವಾರ (ಮೇ 18) ಚೆನ್ನೈನಲ್ಲಿ ಮದುವೆಯಾಗಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಎರಡು ಕುಟುಂಬಗಳ ಸದಸ್ಯರು ಮತ್ತು ಆಪ್ತರು ಮಾತ್ರವೇ ಭಾಗವಹಿಸಿದ್ದರು. ತೀರ ಖಾಸಗಿಯಾಗಿ ನಡೆದ ಈ ಮದುವೆ ಅದ್ದೂರಿಯಾಗಿ ನಡೆದಿದೆ ಎಂದು ಅವರು ಆಪ್ತರು ಹೇಳಿದ್ದಾರೆ.