ಶನಿವಾರ, ಡಿಸೆಂಬರ್ 3, 2022
20 °C

ಹೂ ಮುಡಿದು ಸೀರೆಯುಟ್ಟು ಚೆನ್ನೈಗೆ ಬಂದ ಚೆಲುವೆ ಸನ್ನಿ ಲಿಯೋನ್

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚೆನ್ನೈ: ಭಾರತೀಯ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ಸನ್ನಿ ಲಿಯೋನ್ ಅವರು ಇದೀಗ ತಮಿಳಿನ ‘ಓ ಮೈ ಘೋಸ್ಟ್’ ಸಿನಿಮಾದಲ್ಲಿ ಅಭಿನಯಿಸಿದ್ದು, ಆ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಹಾರರ್ ಕಾಮಿಡಿ ಕಥೆಹೊಂದಿರುವ ಈ ಸಿನಿಮಾದ ಆಡಿಯೊ ಬಿಡುಗಡೆಗೆ ಬುಧವಾರ ಸನ್ನಿ ಚೆನ್ನೈಗೆ ಆಗಮಿಸಿದ್ದರು. ಅವರ ಆಗಮನ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಸನ್ನಿ ತುಸು ವಿಭಿನ್ನವಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದರು. ಹಸಿರು ಸೀರೆಯುಟ್ಟು ಅದಕ್ಕೆ ಒಪ್ಪುವ ಕೆಂಪು ರವಿಕೆ ಧರಿಸಿ ಹೂ ಮುಡಿದು ಅಪ್ಪಟ ಸಂಪ್ರದಾಯಸ್ಥ ನಾರಿಯಾಗಿ ಕಂಗೊಳಿಸಿದ್ದಾರೆ.

ಅವರ ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು  ಸನ್ನಿ ಅವರನ್ನು ಸೀರೆಯಲ್ಲಿ ನೋಡಿ ಅವರ ಅಭಿಮಾನಿಗಳು ಸಂತಸಪಟ್ಟಿದ್ದಾರೆ.

 

ಇನ್ನು ಆರ್ ಯುವನ್ ನಿರ್ದೇಶನದಲ್ಲಿ ಮೂಡಿಬಂದಿರುವ ಓ ಮೈ ಘೋಸ್ಟ್ ಸಿನಿಮಾ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಡಿ.ವೀರಸಕ್ತಿ ಹಾಗೂ ಕೆ.ಸಾಯಿಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸತೀಶ್, ಯೋಗಿ ಬಾಬು ಸೇರಿದಂತೆ ಅನೇಕರ ತಾರಾಗಣವಿದೆ.

ಪ್ರವಾಸ, ಫೋಟೊಶೂಟ್‌, ಹೊಸ ಉಡುಪು ಹಾಗೂ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದ ಚಿತ್ರಗಳು, ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಸನ್ನಿ ಅವರು ತಮ್ಮ ಅಭಿಮಾನಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು