ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ನೀತಿ ಸಂಹಿತೆ ಪಾಲಿಸಿ

ರಾಜಕೀಯ ಮುಖಂಡರ ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಮಲ ಬಾಯಿ ತಾಕೀತು
Last Updated 29 ಮಾರ್ಚ್ 2018, 13:08 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದು ಉಪ ವಿಭಾಗಾಧಿಕಾರಿ ಕಮಲ ಬಾಯಿ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ರಾಜಕೀಯ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದರು.ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ 2,04,089 ಮತದಾರರಿದ್ದಾರೆ. ಆ ಪೈಕಿ ಪುರುಷ ಮತದಾರರ ಸಂಖ್ಯೆ 102626 ಹಾಗೂ ಮಹಿಳಾ ಮತದಾರರ ಸಂಖ್ಯೆ 101463. ಕ್ಷೇತ್ರದಲ್ಲಿ 284 ಮತಗಟ್ಟೆಗಳಿದ್ದು, ಎರಡು ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲಾಗಿದೆ. ಆಪೈಕಿ 57 ಮತಗಟ್ಟೆಗಳನ್ನು ಅತಿ ಸೂಕ್ಷ್ಮ , 121 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 108 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರ ಸಾಮಗ್ರಿ ಪರಿಸರ ಸ್ನೇಹಿಯಾಗಿರಬೇಕು. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಪ್ರಚಾರ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು ಎಂದರು. ಶಾಲಾ ಕಾಲೇಜು, ಆಸ್ಪತ್ರೆ, ದೇವಾಲಯದ ಸಮೀಪ ಧ್ವನಿವರ್ಧಕ ಬಳಸಬಾರದು. ಪ್ರಚಾರ ಸಭೆ, ಪಕ್ಷದ ಬಾವುಟ, ಫ್ಲೆಕ್ಸ್ ಪ್ರದರ್ಶಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ನಿಗದಿತ ಸ್ಥಳಗಳಲ್ಲಿ ಮಾತ್ರ ಅವರಕಾಶ ನೀಡಲಾಗುವುದು. ಆನ್‌ ಲೈನ್‌ ಅನುಮತಿ ಕಡ್ಡಾಯ ಎಂದರು.

ಚುನಾವಣಾ ಅಕ್ರಮ ಕಂಡುಬಂದಲ್ಲಿ ಸಾರ್ವಜನಿಕರು ಟೋಲ್‌ ಫ್ರೀ ನಂಬರ್‌ ದೂ.08157–246222 ಸಮಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಬಹುದು ಎಂದು ಹೇಳಿದರು.ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯ ವೆಚ್ಚವನ್ನು ₹ 28 ಲಕ್ಷಕ್ಕೆ ಮಿತಿಗೊಳಿಸಲಾಗಿದೆ. ಅದಕ್ಕಿಂತ ಹೆಚ್ಚು ಮೊತ್ತದ ಹಣ ಖರ್ಚು ಮಾಡುವಂತಿಲ್ಲ. ಅಭ್ಯರ್ಥಿಯ ಸಹಚರರು ಮಾಡುವ ವೆಚ್ಚವನ್ನೂ ಸಹ ಅಭ್ಯರ್ಥಿಯ ಲೆಕ್ಕಕ್ಕೆ ಸೇರಿಸಲಾಗುವುದು ಎಂದು ಹೇಳಿದರು.ಚುನಾವಣಾಧಿಕಾರಿ ಸುರೇಶ್, ಕಂದಾಯ ನಿರೀಕ್ಷಕ ಮುನಿರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT