ಶುಕ್ರವಾರ, ಆಗಸ್ಟ್ 19, 2022
21 °C

ರಂಗಕರ್ಮಿ, ಸಂಗೀತ ಸಂಯೋಜಕ ಆರ್‌.ಪರಮಶಿವನ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಗೀತ ಸಂಯೋಜಕ ಆರ್. ಪರಮಶಿವನ್

ಬೆಂಗಳೂರು: ರಂಗಭೂಮಿಯ ಹಿರಿಯ ಕಲಾವಿದ ಹಾಗೂ ಸಂಗೀತ ಸಂಯೋಜಕ ಆರ್. ಪರಮಶಿವನ್ (94) ಅವರು ಹೃದಯಾಘಾತದಿಂದ ಗುರುವಾರ ನಿಧನರಾದರು.

ರಾಜಾಜಿನಗರದಲ್ಲಿರುವ ಸ್ವಗೃಹದಲ್ಲಿಯೇ ಮೃತಪಟ್ಟಿದ್ದು, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ದೀಪಕ್ ಪರಮಶಿವನ್ ಅವರು ಕೆನಡಾದಲ್ಲಿ ಇದ್ದಾರೆ. ಪುತ್ರಿ ಸ್ಮಿತಾ ಅವರು ಸ್ಯಾನ್‌ಪ್ರಾನ್ಸಿಸ್ಕೋದಲ್ಲಿ ನೆಲೆಸಿದ್ದಾರೆ. ಅವರು ಶುಕ್ರವಾರ ರಾತ್ರಿ ಬೆಂಗಳೂರಿಗೆ ಬರಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಕೋವಿಡ್‌ ಕಾರಣ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಅವಕಾಶ ಸಿಕ್ಕಿಲ್ಲ. ಹೀಗಾಗಿ ಮನೆಯಲ್ಲಿಯೇ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿದೆ.

ಇದನ್ನೂ ಓದಿ:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು