ಶುಕ್ರವಾರ, ಡಿಸೆಂಬರ್ 4, 2020
21 °C

ಹಿರಿಯ ರಂಗಕರ್ಮಿ ಡಾ.ಟಿ.ಬಿ.‌ಸೊಲಬಕ್ಕನವರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರು ಪತ್ನಿ ಸಾವಿತ್ರಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ರಾಕ್ ಗಾರ್ಡನ್ ಪಕ್ಕ ನ್ಯೂ ವರ್ಕ್ ಶಾಪ್ (ದುಂಡಸಿ ದಾರಿ) ಹತ್ತಿರ ಜರುಗಲಿದೆ.

ಕೋವಿಡ್ ವರದಿ‌ ನೆಗೆಟಿವ್
ಹುಬ್ಬಳ್ಳಿ:
ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸೊಲಬಕ್ಕನವರ ಅವರ ವರದಿ ನೆಗೆಟಿವ್ ಬಂದಿದೆ.

ಸೋಂಕಿನ ಲಕ್ಷಣಗಳು ಕಂಡು‌ ಬಂದಿದ್ದರಿಂದ ಪರೀಕ್ಷೆಗೆ ಗಂಟಲು ಹಾಗೂ ಮೂಗಿನ ದ್ರವದ ಮಾದರಿ‌ ನೀಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.