ಬುಧವಾರ, ಅಕ್ಟೋಬರ್ 28, 2020
18 °C

ಕಿರುತೆರೆ ನಟ ಪದ್ಮನಾಭ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪೇಟೆ: ತಾಲ್ಲೂಕಿನ ರಾಯಸಮುದ್ರ ಗ್ರಾಮದ ನಿವಾಸಿ, ಕಿರುತೆರೆ, ರಂಗ ನಟ ಆರ್‌.ಎಸ್‌.ಪದ್ಮನಾಭ್‌ (47) ಗುರುವಾರ ಹೃದಯಾಘಾತದಿಂದ ನಿಧನರಾದರು.

ಪಂಚರಂಗಿ ಪಾಂಡು, ಉಘೇ ಉಘೇ ಮಹದೇಶ್ವರ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಪ್ಯಾಟಿ ಹುಡುಗೀರ್ ಹಳ್ಳಿ ಲೈಫ್’ ರಿಯಾಲಿಟಿ ಶೋ ತಮ್ಮ ಹುಟ್ಟೂರು ರಾಯಸಮುದ್ರದಲ್ಲಿ ಚಿತ್ರೀಕರಿಸಲು ಸಹಕಾರ ನೀಡಿದ್ದರು. ರಂಗಭೂಮಿಯಲ್ಲಿ ಇವರು ಪದ್ದು ಎಂದೇ ಪ್ರಸಿದ್ಧಿ ಪಡೆದಿದ್ದರು. ನಾಗಮಂಗಲದ ಕನ್ನಡ ಸಂಘ, ಮೈಸೂರಿನ ನಿರಂತರ, ಜನಮನ ರಂಗ ತಂಡಗಳಲ್ಲಿ ಸಕ್ರಿಯರಾಗಿದ್ದರು.

ಪಟ್ಟಣದ ಸುಭಾಷ್‌ನಗರದಲ್ಲಿ ಅವರು ವಾಸವಾಗಿದ್ದರು. ಗುರುವಾರ ಎದೆನೋವು ಕಾಣಿಸಿಕೊಂಡ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ರಾಯಸಮುದ್ರ ಗ್ರಾಮದಲ್ಲಿ ಗುರುವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.