ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ‘ಗ್ರಾಮೀಣ ರಂಗಕಲೆ ನಾಡಿನ ಜೀವಂತ ಸಂಸ್ಕೃತಿಯ ಪ್ರತೀಕವಾಗಿದೆ. ಕೀಳು ಅಭಿರುಚಿ ಮನರಂಜನೆ ಮೂಲಕ ಯುವ ಮನಸುಗಳನ್ನು ಮಲಿನಗೊಳಿಸುತ್ತಿರುವ ಸಾಮಾಜಿಕ ಜಾಲತಾಣದ ವಿಷ ವರ್ತುಲದ ನಡುವೆ ರಂಗಭೂಮಿಯನ್ನು ಉಳಿಸಿ, ಬೆಳೆಸಬೇಕಿದೆ‘ ಎಂದು ಹಿರಿಯ ರಂಗಕರ್ಮಿ ಕೆ.ಮರುಳಸಿದ್ದಪ್ಪ ಹೇಳಿದರು.

ಕರ್ನಾಟಕ ನಾಟಕ ಆಕಾಡೆಮಿ, ರಂಗಭಾರತಿ ಸಹಯೋಗದಲ್ಲಿ ಭಾನುವಾರ ಪಟ್ಟಣದ ರಂಗಭಾರತಿ ಸಭಾಂಗಣದಲ್ಲಿ ಆಯೋಜಿಸಿದ್ದ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ವಿಶಿಷ್ಟ ಪರಂಪರೆಯ ರಂಗಭೂಮಿ ಪ್ರಸ್ತುತ ನಾನಾ ಸವಾಲುಗಳನ್ನು ಎದುರಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿರುವ ಕನ್ನಡ ರಂಗಭೂಮಿ ಸಾಮಾಜಿಕ, ರಾಜಕೀಯ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವ ಸಮುದಾಯವನ್ನು ರಂಗಭೂಮಿಯ ಕಡೆ ಸೆಳೆಯುವುದು ಅಗತ್ಯವಿದೆ’ ಎಂದರು.

‘ಬೆಂಗಳೂರಿನಲ್ಲಿ ರಾಷ್ಟ್ರೀಯ ನಾಟಕ ಕಲಾ ಶಾಲೆ ಉಳಿಯಲು ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ ಅವರು ಕಾರಣರಾಗಿದ್ದಾರೆ. ಅವರಿಗೆ ರಂಗಭೂಮಿ ಆಸಕ್ತಿ ಇದ್ದುದರಿಂದ ಹಡಗಲಿಯಂತಹ ಗ್ರಾಮೀಣ ಪ್ರದೇಶದಲ್ಲಿ ರಂಗಭಾರತಿ ಸಂಸ್ಥೆಯನ್ನು ಕಟ್ಟಲು ಸಾಧ್ಯವಾಯಿತು’ ಎಂದು ಹೇಳಿದರು.

ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ ಮಾತನಾಡಿ, ‘ಗ್ರಾಮೀಣ ರಂಗ ಕಲಾವಿದರು ರಂಗಭೂಮಿಯ ಜೀವಾಳವಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ವಾರ್ಷಿಕ ಆರು ಸಾವಿರಕ್ಕೂ ಹೆಚ್ಚು ನಾಟಕಗಳು ಪ್ರದರ್ಶನಗೊಳ್ಳುತ್ತಿದ್ದು, ಜನರ ಸಹಭಾಗಿತ್ವದ ಈ ನಾಟಕಗಳಿಗೆ ₹ 250 ಕೋಟಿ ವೆಚ್ಚವಾಗುತ್ತದೆ. ಆದರೆ, ನಾಡಿನಲ್ಲಿ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಅಕಾಡೆಮಿಗಳಿಗೆ ಸರ್ಕಾರ ಕೇವಲ ಸರ್ಕಾರ ₹ 200 ಕೋಟಿ ನೀಡುತ್ತಿರುವುದು ವಿಪರ್ಯಾಸ’ ಎಂದರು.

‘ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸ ರಂಗಭೂಮಿಯಿಂದ ಆಗಬೇಕಿದೆ. ಒಡೆದ ಮನಸ್ಸುಗಳನ್ನು ಕಟ್ಟುವ, ಸಾಮರಸ್ಯ ಮೂಡಿಸುವ ಕೆಲಸ ಆಗಬೇಕಿದೆ. ಎಲ್ಲ ಸರ್ಕಾರಿ ಶಾಲೆಗಳಿಗೆ ಸರ್ಕಾರ ರಂಗಭೂಮಿ ಶಿಕ್ಷಕರನ್ನು ನೇಮಿಸಬೇಕು. ಹಿರಿಯ ರಂಗ ಕಲಾವಿದರಿಗೆ ಮಾಸಾಶನ ನೀಡಬೇಕು. ವೃತ್ತಿ ರಂಗಭೂಮಿ, ಜನಪದ ಕಲಾವಿದರಿಗೆ ವೈದ್ಯಕೀಯ ಚಿಕಿತ್ಸೆಯ ವ್ಯವಸ್ಥೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಶಾಸಕ ಕೃಷ್ಣನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ.ಎಸ್.ಮಂಜುನಾಥ ಸ್ವಾಮಿ, ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ.ಸುಮಾ ವಿಜಯ್ ಮಾತನಾಡಿದರು.

ನಾಟಕ ಆಕಾಡೆಮಿ ರಿಜಿಸ್ಟ್ರಾರ್ ಬಿ.ನೀಲಮ್ಮ, ಆಕಾಡೆಮಿ ಸದಸ್ಯರಾದ ಉಗಮ ಶ್ರೀನಿವಾಸ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-39-951909326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.