ಧಾರವಾಡ: ‘ಪಾಲಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೂರಕ ವಾತಾವರಣ ನಿರ್ಮಿಸಬೇಕು. ಆಗ ಮಾತ್ರ ಮಕ್ಕಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಆಕಾಶವಾಣಿ ನಿವೃತ್ತ ಅಧಿಕಾರಿ ಬಸು ಬೇವಿನಗಿಡದ ಹೇಳಿದರು.

ನಗರದ ರಂಗಾಯಣದ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ನಡೆದ ‘ಅಭಿನಯ-ಅಭಿವ್ಯಕ್ತಿ’ ಧ್ಯೇಯವಾಕ್ಯದಡಿ ಆಯೋಜಿಸಿದ್ದ ‘ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಹಾಗೂ ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.

‘ಮಕ್ಕಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಂಗಭೂಮಿ ಎಂದರೆ ಸಾಹಿತ್ಯದ ಭಂಡಾರ. ಅದರಲ್ಲಿ ಅಭಿನಯ, ಅಕ್ಷರಗಳ ಉಚ್ಛರಣೆ, ಪದಗಳನ್ನು ಬಳಸುವ ಬಗೆ, ಭಾವವನ್ನು ವ್ಯಕ್ತಪಡಿಸುವ ವಿಧಾನ ಎಲ್ಲವೂ ಇದೆ. ಇಂತಹ ರಂಗಕಲೆಯನ್ನು ರೂಢಿಸಿಕೊಳ್ಳುವ ಮಕ್ಕಳು ಉತ್ತಮ ಜೀವನವನ್ನು ರೂಪಿಸಿಕೊಳ್ಳುತ್ತಾರೆ’ ಎಂದು ಅಭಿಪ್ರಾಯಪಟ್ಟರು.

‘ರಂಗಾಯಣವು ಮಕ್ಕಳಲ್ಲಿ ಹುದುಗಿರುವ ಸಾಂಸ್ಕೃತಿಕ ಕಲೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ’ ಎಂದರು.

ರಂಗಾಯಣ ನಿರ್ದೇಶಕ ಝಕೀರ ನದಾಫ್ ಮಾತನಾಡಿ, ‘ರಂಗಭೂಮಿಯು ಪರಿಣಾಮಕಾರಿ ಮಾಧ್ಯಮವಾಗಿದೆ. ಇಲ್ಲಿ ನೀಡುವ ತರಬೇತಿ, ಚಟುವಟಿಕೆಗಳು ಕೇವಲ ಜೀವನವನ್ನು ರೂಪಿಸುವುದಲ್ಲದೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುತ್ತದೆ. ಆದ್ದರಿಂದ ಮಕ್ಕಳಿಗೆ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಲು ಪಾಲಕರು ಉತ್ತೇಜನ ನೀಡಬೇಕು’ ಎಂದು ಹೇಳಿದರು.

ಚಿಣ್ಣರ ಮೇಳದ ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ, ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-24-167867684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.