ದೊಡ್ಡಬಳ್ಳಾಪುರ: ಕನ್ನಡ ನಾಟಕಗಳು, ವೃತ್ತಿ ರಂಗಭೂಮಿ ಮತ್ತು ಗ್ರಾಮೀಣ ಪ್ರದೇಶದ ಪೌರಾಣಿಕ ನಾಟಕಗಳು ಕನ್ನಡ ಸೊಗಡನ್ನು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು ಹೇಳಿದರು.

ತಾಲ್ಲೂಕು ಕಲಾವಿದರ ಸಂಘ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಮಾತನಾಡಿ, ಯಕ್ಷಗಾನ, ದೊಡ್ಡಾಟ, ಬಯಲಾಟ ಮುಂತಾದ ಜನಪದ ಪ್ರಕಾರಗಳು ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದರು.

ಆಧುನಿಕ ಕನ್ನಡ ರಂಗಭೂಮಿಯು ಸಾಮಾಜಿಕ ಸಮಸ್ಯೆ, ಮೌಲ್ಯ ಮತ್ತು ಸಾಂಸ್ಕೃತಿಕ ತಲ್ಲಣಗಳನ್ನು ಪ್ರದರ್ಶಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ. ಕನ್ನಡ ರಂಗಭೂಮಿಯಲ್ಲಿ ನಿರಂತರ ಪ್ರಯೋಗಗಳು ನಡೆಯುತ್ತಲೇ ಇವೆ ಎಂದರು.

ಹಿರಿಯ ರಂಗಭೂಮಿ ಕಲಾವಿದ ಸುರದೇನುಪುರ ಶಿವರಾಜು, ರಾಜ್ಯದಲ್ಲಿ ಕನ್ನಡ ಭಾಷೆ ವೈವಿಧ್ಯಮಯ ಉಪಭಾಷೆಗಳಾಗಿ ಪ್ರಯೋಗಗೊಳ್ಳುತ್ತಿದೆ. ರಂಗಭೂಮಿ ಕಲಾವಿದರ ಕನ್ನಡ ಭಾಷೆಯ ಬಳಕೆ ಮತ್ತು ಸ್ಪಷ್ಟ ಉಚ್ಚಾರಣೆ ಅನನ್ಯವಾಗಿದೆ. ಆಧುನಿಕ ಮನರಂಜನಾ ಮಾಧ್ಯಮಗಳ ಮಧ್ಯೆ ರಂಗಭೂಮಿ ಕಲೆ ತನ್ನದೇ ಆದ ಅಸ್ತಿತ್ವವನ್ನು ಪಡೆದುಕೊಂಡಿರುವುದು ಸಂತೋಷಕರ ವಿಚಾರವಾಗಿದೆ ಎಂದು ತಿಳಿಸಿದರು.

ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರದ ಜಾನಪದ ಕಲಾವಿದೆ ರತ್ನಮ್ಮ ಮತ್ತು ಜಂಗಮಕೋಟೆ ರಂಗಭೂಮಿ ಕಲಾವಿದೆ ಕದಿರಮ್ಮ ಅವರನ್ನು ಸತ್ಕರಿಸಲಾಯಿತು.

ಹಿರಿಯ ರಂಗಭೂಮಿ ಕಲಾವಿದೆ ಜಯಮ್ಮ, ತಾಲ್ಲೂಕು ಕಲಾವಿದರ ಸಂಘದ ಗೌರವ ಅಧ್ಯಕ್ಷ ಎನ್.ರಾಮಮೂರ್ತಿ, ಕಾರ್ಯದರ್ಶಿ ಚಂದ್ರಶೇಖರ್, ಉಪಾಧ್ಯಕ್ಷ ಕೆ.ನರಸಿಂಹಯ್ಯ, ಖಜಾಂಚಿ ಮುನಿಪಾಪಯ್ಯ ನಿರ್ದೇಶಕ ಜಿ.ರಾಮು, ವೆಂಕಟರಾಜು, ಆನಂದಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-15-243868568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.