ಹುಬ್ಬಳ್ಳಿ: ‘ರಂಗಭೂಮಿ ಬದುಕಿನ ಪಾಠಶಾಲೆ ಇದ್ದಂತೆ’ ಎಂದು ಕೆಎಲ್ಇ ಆಸ್ಪತ್ರೆ ನಿರ್ದೇಶಕ ಡಾ. ಎಂ.ಜಿ. ಹಿರೇಮಠ ಅಭಿಪ್ರಾಯಪಟ್ಟರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸುನಿಧಿ ಕಲಾ ಸೌರಭ ವತಿಯಿಂದ ಈಚೆಗೆ ಆಯೋಜಿಸಿದ್ದ ‘ರಂಗ ಸೌರಭ’ ಪುರಸ್ಕಾರ ಪ್ರದಾನ ಹಾಗೂ ‘ಅನಾಥರ ಮಾಯಿ’ ನಾಟಕ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರಂಗಭೂಮಿಯು ಎಲ್ಲ ಕಲೆಗಳ ತಾಯಿ. ಸಾಮಾಜಿಕ ಬದಲಾವಣೆಗಳಿಗೆ ರಂಗಭೂಮಿ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಜನರಲ್ಲಿ ರಂಗಭೂಮಿ ಬಗೆಗಿನ ಆಸಕ್ತಿ ಕಡಿಮೆಯಾಗುತ್ತಿದೆ. ಯುವಕರನ್ನು ರಂಗಭೂಮಿಯತ್ತ ಸೆಳೆದು ಹೊಸ ಪ್ರೇಕ್ಷಕರನ್ನು ಸೃಷ್ಟಿಸುವ ಕೆಲಸ ಆಗಬೇಕು ’ ಎಂದು ತಿಳಿಸಿದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಂಡು ಕುಲಕರ್ಣಿ, ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗರವಾಡಿ, ಗೋವಿಂದ ಮಣ್ಣೂರ ಮಾತನಾಡಿದರು.

ಡಾ. ಎಂ.ಜಿ. ಹಿರೇಮಠ ಹಾಗೂ ಭರತನಾಟ್ಯ ಪ್ರವೀಣ ವಿದ್ವಾನ್ ಸುಜಯ ಶಾನಭಾಗ ಅವರಿಗೆ ‘ರಂಗ ಸೌರಭ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುನಿಧಿ ಕಲಾ ಸೌರಭದ ಅಧ್ಯಕ್ಷ ಸುಭಾಸ ನರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸಂತೋಷ ಮೋಕಾಶಿ, ವೀಣಾ ಅಠವಲೆ, ಸತೀಶ ಮೂರೂರು, ಕೀರ್ತಿವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-24-2041937134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.