ಕಾರವಾರ: ಕರ್ನಾಟಕ ನಾಟಕ ಅಕಾಡೆಮಿಯು ಕಲಾವಿದರ ಪರಿಚಯದ ಬೃಹತ್ ರಂಗ ಸಂಪುಟವನ್ನು ಹೊರತರಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಂಗಭೂಮಿ ಕಲಾವಿದರಿಂದ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ನಟರು, ನಿರ್ದೇಶಕರು, ನಾಟಕಕಾರರು, ಸಂಗೀತ ತಜ್ಞರು, ರಂಗ ಕುಶಲಕರ್ಮಿಗಳು, ವೇಷಭೂಷಣ ಸೇರಿದಂತೆ ನೇಪಥ್ಯದಲ್ಲಿ ಕೆಲಸ ಮಾಡುತ್ತಿರುವ ಕಲಾವಿದರು ಮಾಹಿತಿ ನೀಡಬಹುದು.

30 ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿರುವ, 40 ವರ್ಷ ಮೇಲ್ಪಟ್ಟವರು ತಮ್ಮ ಸ್ವವಿವರಗಳನ್ನು ಜೂನ್ 10ರ ಒಳಗೆ ಸಲ್ಲಿಸಬೇಕು. ‘ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ತಳಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು’ ವಿಳಾಸಕ್ಕೆ ಅಥವಾ ಇ ಮೇಲ್:academy.nataka@gmail.com ಗೆ ಕಳುಹಿಸಬಹುದು. ಅಗತ್ಯ ಮಾಹಿತಿಗೆ ಅಕಾಡೆಮಿ ಕಚೇರಿ (080 22244176) ಸಂಪರ್ಕಿಸಬಹುದು ಎಂದು ಅಕಾಡೆಮಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-20-1045207094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.