ಕಾರವಾರ: ‘ಕನ್ನಡ ಸಾಹಿತ್ಯ ಪರಿಷತ್ನ್ನು ಸ್ಥಾಪಿಸಿದ ನಾಡಿನ ಹಿರಿಯರ ಆಶಯಕ್ಕೆ ಧಕ್ಕೆ ಬರದಂತೆ ಸಂಸ್ಥೆ ಮುನ್ನಡೆಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸುವ ಕೆಲಸ ಆಗಬೇಕಿದೆ’ ಎಂದು ರಂಗಭೂಮಿ ಕಲಾವಿದರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ನಾಯ್ಕ ಹೇಳಿದರು.

ಇಲ್ಲಿನ ಕನ್ನಡ ಭವನದಲ್ಲಿ ಈಚೆಗೆ ಕಸಾಪ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಾತನಾಡಿ, ‘ನಾವು ಹೆಗಲ ಮೇಲೆ ಹಾಕಿಕೊಳ್ಳುವ ಕನ್ನಡದ ಶಾಲಿಗೆ ಈ ಹಿಂದೆ ಇದ್ದ ಘನತೆ, ಗೌರವ ಇಂದು ಉಳಿದಿಲ್ಲ. ಸಾಹಿತ್ಯ ಪರಿಷತ್ ಸಾಹಿತ್ಯಿಕ ಚಟುವಟಿಕೆಯ ಜೊತೆಗೆ ಸಮಾಜಕ್ಕೆ ಮಾರ್ಗದರ್ಶಿಯಾಗುವ ಕೆಲಸ ಮಾಡಬೇಕಿದೆ’ ಎಂದರು.

ನಿವೃತ್ತ ಪ್ರಾಚಾರ್ಯ ಆರ್.ಎಸ್. ಹಬ್ಬು, ‘ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯುವಕರಿಗೆ ಹೆಚ್ಚು ಸದಸ್ಯರನ್ನಾಗಿ ಮಾಡಿಕೊಂಡು ಮುಂದಿನ ಪೀಳಿಗೆಗೆ ಜವಾಬ್ದಾರಿ ಕೊಡಬೇಕು’ ಎಂದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಪಿ.ಎಸ್.ರಾಣೆ, ಕಸಾಪ ಪದಾಧಿಕಾರಿಗಳಾದ ಶಿವಾನಂದ ತಾಂಡೇಲ, ಜಿ.ಡಿ.ಮನೋಜೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-1262439266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.