ಮಂಡ್ಯ: ‘ದೇವಿ ಮಹಾತ್ಮೆ’ ಮೂಡಲಪ್ರಾಯ ಯಕ್ಷಗಾನ ಪ್ರಸಂಗ ಮತ್ತು ‘ಅತ್ತಲಾ ಕಿಷ್ಕಿಂಧೆಯೊಳ್’ ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ಆಧರಿಸಿದ ನಾಟಕ ಪ್ರದರ್ಶನವನ್ನು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮೇ 16ರಂದು ಸಂಜೆ 4ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಕಾರ್ಯದರ್ಶಿ ಚಂದಗಾಲು ಪಿ.ಲೋಕೇಶ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ಮೂಡಲಪಾಯ ಯಕ್ಷಗಾನ ಪರಿಷತ್ತು, ಆದಿಚುಂಚನಗಿರಿ ಮೂಡಲಪಾಯ ಯಕ್ಷಗಾನ ಕೇಂದ್ರ ಹಾಗೂ ಕರ್ನಾಟಕ ಸಂಘದ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ಪ್ರದಾನ ನಡೆಯಲಿದೆ ಎಂದು ತಿಳಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮಶೆಟ್ಟಿ ಉದ್ಘಾಟಿಸುವರು.

ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತಾ, ಸಮಾಜ ಸೇವಕ ಆರ್ಟಿಒ ಮಲ್ಲಿಕಾರ್ಜುನ್, ಜನಾರ್ದನ್, ನಿವೃತ್ತ ಪ್ರಾಧ್ಯಾಪಕ ಚಿಕ್ಕಣ್ಣ ಯಣ್ಣೆಕಟ್ಟೆ ಪಾಲ್ಗೊಳ್ಳಲಿದ್ದಾರೆ. ಆಂಧ್ರಪ್ರದೇಶದ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಜಯರಾಂ ರಾಯಪುರ ಅವರು ನಾಟಕದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪ್ರದಾನ ಮಾಡಲಿದ್ದಾರೆ ಎಂದರು. ಗೋಷ್ಠಿಯಲ್ಲಿ ವಿಶ್ರಾಂತ ಪ್ರಾಂಶುಪಾಲ ಎಸ್.ಬಿ. ಶಂಕರಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕೆ. ಹರೀಶ್ಕುಮಾರ್, ಕಾರ್ಯದರ್ಶಿ ಎಚ್.ಡಿ. ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-752968150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.