ಮೈಸೂರು: ಮಂಡ್ಯ ರಮೇಶ್ ಸಾರಥ್ಯದ ನಟನ ರಂಗಶಾಲೆಯು ಒಂದು ವರ್ಷದ ರಂಗಭೂಮಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಅಭ್ಯರ್ಥಿಗಳ ಆಯ್ಕೆಗಾಗಿ ಮೇ 17ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ರಾಮಕೃಷ್ಣ ನಗರದಲ್ಲಿರುವ ರಂಗಶಾಲೆಯ ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ.

16ರಿಂದ 32 ವರ್ಷದ ಒಳಗಿನ ಯುವಜನರು ಅರ್ಜಿ ಸಲ್ಲಿಸಬಹುದು. ಪ್ರತಿದಿನ ಸಂಜೆ 5.30 ರಿಂದ ರಾತ್ರಿ 9ರ ವರೆಗೆ ತರಗತಿಗಳು ನಡೆಯಲಿವೆ. ಒಂದು ವರ್ಷದ ಅವಧಿಯಲ್ಲಿ ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾದನ, ಬೆಳಕು, ರಂಗ ವಿನ್ಯಾಸ ಸೇರಿದಂತೆ ರಂಗಭೂಮಿಯ ವಿವಿಧ ಆಯಾಮಗಳ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಅರ್ಜಿಯನ್ನು ರಂಗಶಾಲೆಯ ಕಚೇರಿಯಲ್ಲಿ ಪಡೆದು ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ಮಾಹಿತಿಗೆ ಮೊಬೈಲ್ ಸಂಖ್ಯೆ: 7259537777, 9480468327, 9845595505 ಸಂಪರ್ಕಿಸಬಹುದು ಎಂದು ಪ್ರಕಟಣೆಯು ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1142403703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.