ಸಾಗರ: ಇಲ್ಲಿನ ನಮ್ಮ ರಂಗಸ್ವರೂಪ ಟ್ರಸ್ಟ್ ಸಂಸ್ಥೆಯು ಮೇ 30ರಂದು ಸಂಜೆ 6ಕ್ಕೆ ಶಿವಮೊಗ್ಗ ರಸ್ತೆಯ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಗೀತಗಾಯನ ಕಾರ್ಯಕ್ರಮ ಆಯೋಜಿಸಿದೆ.

ಹಿಂದೂಸ್ತಾನಿ ಗಾಯಕಿ ವಸುಧಾ ಶರ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಂಪಿ ವಿ.ವಿ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ್, ಕಿರಣ್ ಕೆ.ಎಸ್. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಮೇ 31ರಂದು ಸಂಜೆ 6.30ಕ್ಕೆ ಕನ್ನಡ ವಿವಿ ವಿದ್ಯಾರ್ಥಿಗಳು ಅಭಿನಯಿ ಸಿರುವ ‘ಜೋಕುಮಾರ ಸ್ವಾಮಿ’ (ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಸಿ.ಟಿ.ಬ್ರಹ್ಮಾಚಾರ್) ನಾಟಕ ಪ್ರದರ್ಶನಗೊಳ್ಳಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಪ್ರದರ್ಶನ ಉದ್ಘಾಟಿಸಲಿದ್ದು, ನಮ್ಮ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-42-987343967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.