ತುಮಕೂರು: ಹರಿಕಥಾ ವಿದ್ವಾನ್, ರಂಗಕಲಾವಿದ ಲಕ್ಷ್ಮಣದಾಸ್ ಅಭಿನಂದನಾ ಸಮಾರಂಭ ಮಾರ್ಚ್ 29ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಇಡೀ ದಿನ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷ್ಮಣದಾಸ್ ಬದುಕು, ಜೀವನ, ಸಾಧನೆ ಹಾಗೂ ರಂಗಭೂಮಿ, ಕೀರ್ತನಾ ಕಲೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಬಗ್ಗೆ ಪ್ರಮುಖರು ತಿಳಿಸಿಕೊಡಲಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ರಂಗಭೂಮಿ ಕಲಾವಿದರ ಸಂಘ, ಅಖಿಲ ಕರ್ನಾಟಕ ಕೀರ್ತನಾ ಕಲಾ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ದಿನವಿಡೀ ವಿವಿಧ ಗೋಷ್ಠಿ, ಸಂವಾದ ಆಯೋಜಿಸಲಾಗಿದೆ. ‘ಜೀವನದ ಪ್ರಮುಖ ಹೆಜ್ಜೆಗಳು, ಕಥಾಕೀರ್ತನೆ, ರಂಗಭೂಮಿ, ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ’ ಕುರಿತು ತಜ್ಞರು ವಿಚಾರ ಮಂಡನೆ ಮಾಡಲಿದ್ದಾರೆ.

ಭಾನುವಾರ ನಡೆಯುವ ಉದ್ಘಾಟನಾ ಕಾರ್ಯಕ್ರಮಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಭಾಗವಹಿಸುವರು. ಸಮಾರೋಪ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮೊದಲಾದವರು ಪಾಲ್ಗೊಳ್ಳುವರು.

ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಅಧ್ಯಕ್ಷತೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರ ಪೂರ್ವಭಾವಿ ಸಭೆ ನಡೆಯಿತು. ಪ್ರಮುಖರಾದ ಧನಿಯಾಕುಮಾರ್, ವೈ.ಎನ್.ಶಿವಣ್ಣ, ಎಂ.ವಿ.ನಾಗಣ್ಣ, ವಸಂತಕುಮಾರ್, ಯೋಗಾನಂದಕುಮಾರ್, ಪಿ.ಎನ್.ರಾಮಯ್ಯ, ನಟರಾಜಶೆಟ್ಟಿ, ಶಬ್ಬೀರ್ ಅಹ್ಮದ್, ಬೆಸ್ಟೆಕ್ಸ್ ರಾಮರಾಜು ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-17-1954975225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.