ಉಡುಪಿ: ಸುಮನಸಾ ಕೊಡವೂರು ಸಂಸ್ಥೆಯ ರಜತ ಸಂಭ್ರಮ ಉದ್ಘಾಟನಾ ಸಮಾರಂಭ ಇದೇ 31ರಂದು ಸಂಜೆ 5 ಗಂಟೆಗೆ ನಗರದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ರೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಯಸ್ಪೆನ್ ಸ್ಪೆಶಲ್ ಇಕೋನೊಮಿಕ್ ಜೋನ್ ಮುಖ್ಯಸ್ಥ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಶಾಸಕ ಯಶ್ಪಾಲ್ ಸುವರ್ಣ ಲೋಗೋ ಅನಾವರಣ ಮಾಡುವರು. ಬನ್ನಂಜೆ ಸಂಜೀವ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್, ರಜತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ಪ್ರಮೋದ್ ಮಧ್ವರಾಜ್, ಎಂ.ಎಲ್. ಸಾಮಗ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಅಂದು ಸಂಜೆ 5 ಗಂಟೆಗೆ ಸುಮಲಹರಿ ರಂಗಗೀತಾ ಗಾಯನ, 6ಕ್ಕೆ ಉದ್ಘಾಟನಾ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ಮಕ್ಕಳ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಗೌರವಾಧ್ಯಕ್ಷ ಎಂ.ಎಸ್.ಭಟ್, ಸಂಚಾಲಕ ಭಾಸ್ಕರ್ ಪಾಲನ್ ಬಾಚನಬೈಲು, ಉಪಾಧ್ಯಕ್ಷ ವಿನಯ್ ಕಲ್ಮಾಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-48168538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.