ಕನ್ನಡದ ಬಿಗ್ಬಾಸ್ 10ನೇ ಆವೃತ್ತಿ ವಿಜೇತರಾಗಿದ್ದ ನಟ ಕಾರ್ತಿಕ್ ಮಹೇಶ್ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಕಾರ್ತಿಕ್ ಮಹೇಶ್ ಬಿಗ್ಬಾಸ್ ಸೀಸನ್ 10ರ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.

ನಟ ಕಾರ್ತಿಕ್ ಮಹೇಶ್ ಅವರಿಗೆ ಬಿಗ್ಬಾಸ್ ಶೋ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಸದ್ಯ ನಟ ಕಾರ್ತಿಕ್ ಮಹೇಶ್ ಹುಟ್ಟುಹಬ್ಬದ ಖುಷಿಯಲ್ಲಿದ್ದಾರೆ. ಹೀಗಾಗಿ ಗೆಳೆಯನಿಗೆ ನಟಿ, ಬಿಗ್ಬಾಸ್ ಮಾಜಿ ಸ್ಪರ್ಧಿ ನಮ್ರತಾ ಗೌಡ ಅವರು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
.Sandalwood: ‘ಮಹಾನ್’ ಸಿನಿಮಾಗೆ ನಮ್ರತಾ ಗೌಡ ಪ್ರವೇಶ.
ನಟಿ ನಮ್ರತಾ ಗೌಡ ಸಾಮಾಜಿಕ ಮಾಧ್ಯದಲ್ಲಿ ವಿಶೇಷವಾದ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಮ್ರತಾ ಗೌಡ ಹಂಚಿಕೊಂಡ ವಿಡಿಯೊದಲ್ಲಿ ಕಾರ್ತಿಕ್ ಮಹೇಶ್ ಅವರ ಜೊತೆಗೆ ಇರುವ ಒಂದಷ್ಟು ಸುಂದರ ಕ್ಷಣಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಗೌಡ ಜೊತೆಗೆ ಸುತ್ತಾಡಿರುವ ಸಣ್ಣ ತುಣುಕುಗಳ ವಿಡಿಯೊ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಹುಟ್ಟುಹಬ್ಬದ ಶುಭಾಶಯಗಳು ಸ್ಟಾರ್’ ಅಂತ ಅಡಿಬರಹ ಬರೆದುಕೊಂಡಿದ್ದಾರೆ.

ನಮ್ರತಾ ಗೌಡ ಹಾಗೂ ಕಾರ್ತಿಕ್ ಮಹೇಶ್ ಇಬ್ಬರು ಬಿಗ್ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ಬಾಸ್ ಮೂಲಕವೇ ಇಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು. ಬಿಗ್ಬಾಸ್ನಿಂದ ಆಚೆ ಬಂದ ಬಳಿಕವೂ ಈ ಇಬ್ಬರು ಉತ್ತಮ ಸ್ನೇಹ ಮುಂದುವರೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.