ಬುಧವಾರ, ಜುಲೈ 6, 2022
23 °C

ಕೋಲ್ಕತ್ತ ಪುಸ್ತಕೋತ್ಸವದಲ್ಲಿ ಕಳ್ಳತನ ಆರೋಪ: ನಟಿ ರೂಪಾ ದತ್ತಾ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ‘ಅಂತರರಾಷ್ಟ್ರೀಯ ಕೋಲ್ಕತ್ತ ಪುಸ್ತಕೋತ್ಸವದಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ ಆರೋಪದಡಿ ಕಿರುತೆರೆ ನಟಿ ರೂಪಾ ದತ್ತಾ ಅವರನ್ನು ಶನಿವಾರ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು. 

‘ಪುಸ್ತಕೋತ್ಸವದಲ್ಲಿ ದತ್ತಾ ಅವರು ತಮ್ಮ ಪರ್ಸ್‌ ಅನ್ನು ಕಸದ ಬುಟ್ಟಿಗೆ ಎಸೆದಿದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಿಚಾರಣೆ ನಡೆಸಿದರು. ಈ ವೇಳೆ ಅವರು ವ್ಯತಿರಿಕ್ತ ಹೇಳಿಕೆಗಳನ್ನು ನೀಡಿದರು. ಇದರಿಂದ ಸಂದೇಹಗೊಂಡ ಪೊಲೀಸರು ದತ್ತಾ ಅವರ ಬ್ಯಾಗ್‌ ಪರಿಶೀಲಿಸಿದಾಗ ಹಲವು ಪರ್ಸ್‌ಗಳು ಹಾಗೂ ₹75 ಸಾವಿರ ಸಿಕ್ಕಿವೆ’ ಎಂದು ಉತ್ತರ ಬಿಧಾನ್‌ ನಗರ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಈ ಪ್ರಕರಣ ಸಂಬಂಧ ತನಿಖೆ ಆರಂಭಿಸಲಾಗಿದೆ. ಇದರಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು