ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ಕವಿತಾ ಗೌಡ ಮತ್ತು ಚಂದನ್ ದಂಪತಿಗೆ ಗಂಡು ಮಗು ಜನಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಮಾಹಿತಿ ಹಂಚಿಕೊಂಡಿದ್ದಾರೆ.
‘ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ’ ಎಂದು ಬರೆದುಕೊಂಡು, ಗಂಡು ಮಗು ಜನಿಸಿರುವ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಇಬ್ಬರೂ ನಟಿಸಿದ್ದರು. ಇಬ್ಬರೂ ಪ್ರೀತಿಸಿ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದರು. ಕೆಲ ತಿಂಗಳ ಹಿಂದ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಅಲ್ಲದೆ ಅದ್ಧೂರಿಯಾಗಿ ಸೀಮಂತ ಮಾಡಿಕೊಂಡ ಫೋಟೊಗಳನ್ನೂ ಹಂಚಿಕೊಂಡಿದ್ದರು. ಇದೀಗ ಮೊದಲ ಮಗುವನ್ನು ಜೋಡಿ ಬರಮಾಡಿಕೊಂಡಿದ್ದಾರೆ.