ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ‘ಇನ್ ಟು ದಿ ವೈಲ್ಡ್‌ನಲ್ಲಿ' ಬಾಲಿವುಡ್ ನಟ ಅಜಯ್ ದೇವಗನ್ ಕಾಣಿಸಿಕೊಳ್ಳಲಿದ್ದಾರೆ.
ಈ ಕುರಿತು ಭಾನುವಾರ ಮಾಹಿತಿ ನೀಡಿರುವ ಕಾರ್ಯಕ್ರಮದ ಆಯೋಜಕರು, '52ರ ವರ್ಷದ ದೇವಗನ್ ಶೀಘ್ರದಲ್ಲೇ ಇನ್ ಟು ದಿ ವೈಲ್ಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾಲ್ಡೀವ್ಸ್‌ನಲ್ಲಿ ನಡೆಯುವ ಹೊಸ ಸಂಚಿಕೆಯ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ತಿಳಿಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್, ಮಿಷೆಲ್ ಬಿ ಜಾರ್ಡನ್, ಜ್ಯಾಕ್ ಎಫ್ರಾನ್ ಸೇರಿದಂತೆ ವಿಶ್ವದ ಹಲವು ಗಣ್ಯರು ಈ ಅಡ್ವೆಂಚರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡಿದ್ದರು.
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗ್ರಿಲ್ಸ್‌ನ ಜೊತೆಗೆ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ ಭರ್ಜಿ ಹಿಡಿದು ಹೆಜ್ಜೆ ಹಾಕಿದ್ದರು. ಹುಲಿಗಳ ಸಂಖ್ಯೆ ಹೆಚ್ಚಿರುವ ಈ ಕಾನನದಲ್ಲಿ ಮೋದಿ ಅವರು ತಮ್ಮ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟಿದ್ದರು. ವಿಶ್ವದ 180 ದೇಶಗಳಲ್ಲಿ ಏಕಕಾಲಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಿತ್ತು.
ಕಳೆದ ವರ್ಷ ಇನ್ ಟು ದಿ ವೈಲ್ಡ್ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರೂ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.