ಮಂಗಳವಾರ, ಆಗಸ್ಟ್ 9, 2022
23 °C

ಅಮೃತಾ ನಾಯ್ಡು ಬದುಕಿಗೆ ಪುತ್ರನ ಆಗಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಿರುತೆರೆ ನಟಿ ಅಮೃತಾ ನಾಯ್ಡು ಅವರು ಭಾನುವಾರ ಗಂಡುಮಗುವಿಗೆ ಜನ್ಮ ನೀಡಿದರು. ಇದೇ ವರ್ಷ ಜನವರಿ 14ರಂದು ಅವರ ಪುತ್ರಿ ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. 

ಮಗಳು ಸಮನ್ವಿ ಜೊತೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನಮ್ಮಮ್ಮ ಸೂಪರ್ ಸ್ಟಾರ್‌ ರಿಯಾಲಿಟಿ ಷೋ ಮೂಲಕ ಅವರು ಖ್ಯಾತರಾಗಿದ್ದರು. ಇದೇ ಅವಧಿಯಲ್ಲಿ ಟಿಪ್ಪರ್‌ ಡಿಕ್ಕಿ ಹೊಡೆದು ಸಮನ್ವಿ ಮೃತಪಟ್ಟಿದ್ದಳು. 

ಗಂಡು ಮಗು ಜನಿಸಿದ ಸಂಭ್ರಮದಲ್ಲಿ ಅವರು ಪತಿ ರೂಪೇಶ್‌ ಜೊತೆಗಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಕಷ್ಟದ ಸಮಯದಲ್ಲಿ ಜೊತೆಗಿದ್ದ ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದದಿಂದ ರೂಪೇಶ್‌ ಮತ್ತು ನಾನು ಗಂಡು ಮಗುವನ್ನು ಪಡೆದಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು