ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bigg Boss Kannada 10: ಗೆದ್ದು ಬೀಗಿದ ಕಾರ್ತಿಕ್, ರನ್ನರ್‌ ಅಪ್‌ ಆದ ಪ್ರತಾಪ್

Published 28 ಜನವರಿ 2024, 18:39 IST
Last Updated 28 ಜನವರಿ 2024, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 10ರಲ್ಲಿ ಕಾರ್ತಿಕ್ ಅವರು ಗೆಲುವು ಸಾಧಿಸಿದ್ದಾರೆ. ಪ್ರತಾಪ್ ಅವರು ರನ್ನರ್ ಅಪ್‌ ಆಗಿದ್ದಾರೆ.

ಸಂಗೀತಾ, ಕಾರ್ತಿಕ್, ವಿನಯ್, ಪ್ರತಾಪ್, ವರ್ತೂರು ಸಂತೋಷ್, ತುಕಾಲಿ ಸಂತೋಷ್ ಅವರು ಫಿನಾಲೆ ಪ್ರವೇಶಿಸಿದ್ದರು.

ಈ ಹಿಂದೆ ಮನೆಯಿಂದ ಎಲಿಮಿನೇಟ್ ಆಗಿದ್ದ ತನಿಶಾ, ನಮ್ರತಾ ಸೇರಿದಂತೆ ಹಲವು ಸದಸ್ಯರು ಕಾರ್ತಿಕ್ ಅವರು ಗೆಲ್ಲಬಹುದು ಎಂದು ಹೇಳಿದ್ದರು.

ಇಂದು ನಡೆದ ಫಿನಾಲೆಯಲ್ಲಿ ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್‌ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು.

ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋನ್‌ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್‌ ಕೈ ಇತ್ತು. ಆ ಟೆನ್ಷನ್‌ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು.

ಇಬ್ಬರ ಕೈಯಲ್ಲಿ ಕಿಚ್ಚ ಕಾರ್ತಿಕ್ ಅವರ ಕೈ ಎತ್ತಿ ಹಿಡಿದರು. ಅದು ಕಾರ್ತಿಕ್ ಬದುಕಿನಲ್ಲಿಯಷ್ಟೇ ಅಲ್ಲ, ಅವರ ಅಭಿಮಾನಿಗಳೆಲ್ಲರ ಮನಸಲ್ಲಿಯೂ ಅತ್ಯಂಗ ಮಹತ್ವದ ಅಮೂಲ್ಯವಾದ ಗಳಿಗೆ. ಅತ್ಯಂತ ಯಶಸ್ಸು ಕಂಡ ಹತ್ತನೇ ಐತಿಹಾಸಿಕ ಸೀಸನ್‌ನಲ್ಲಿ ಕಾರ್ತಿಕ್ ಮಹೇಶ್ ಅವರು ಗೆಲುವು ಸಾಧಿಸಿದ್ದಾರೆ. ₹50 ಲಕ್ಷ ನಗದು ಬಹುಮಾನ, ಜೊತೆಗೆ ಒಂದು ಮಾರುತಿ ಬ್ರೀಜಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ.

ನಟ ಕಿಚ್ಚ ಸುದೀಪ್‌ ಅವರು ನಡೆಸಿಕೊಟ್ಟ ಈ ಶೋನಲ್ಲಿ ಒಟ್ಟು 17 ಸ್ಪರ್ಧಿಗಳು ಭಾಗವಹಿಸಿದ್ದರು. ಸಿನಿಮಾ, ಧಾರವಾಹಿ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT