ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK 10 | ಮೈಕಲ್ VS ವರ್ತೂರು ಸಂತೋಷ್: ಯಾರಾಗ್ತಾರೆ ಈ ವಾರದ ಕಳಪೆ ಸ್ಪರ್ಧಿ?

Published 5 ಜನವರಿ 2024, 6:53 IST
Last Updated 5 ಜನವರಿ 2024, 6:53 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ಬಾಸ್ ಮನೆಯೊಳಗೆ ವಾರಾಂತ್ಯ ಸಮೀಪಿಸುತ್ತಿದ್ದಂತೆಯೇ ಕಳಪೆ -ಉತ್ತಮ ಯಾರು ಎಂಬ ಹಾವು ಏಣಿ ಆಟ ಮತ್ತೆ ಶುರುವಾಗಿದೆ.

ಈ ವಾರ ಬಹುಮಾನದ ಮೊತ್ತವನ್ನು ಗಳಿಸುವ ಟಾಸ್ಕ್ ಅನ್ನು ಬಿಗ್‌ಬಾಸ್ ಮನೆಯ ಸದಸ್ಯರಿಗೆ ನೀಡಿತ್ತು. ಈ ಟಾಸ್ಕ್‌ಗಳಲ್ಲಿ ಆಡುವ ಅವಕಾಶಕ್ಕಾಗಿ ಮಾತಿನ ಚಕಮಕಿಗಳೂ ನಡೆದಿದ್ದವು. ಈಗ ಅವೆಲ್ಲ ಮುಗಿದು ಈ ವಾರದ ಕಳಪೆ ಯಾರು? ಉತ್ತಮ ಯಾರು ಎಂಬುದನ್ನು ನಿರ್ಧರಿಸುವ ಹಂತ ಬಂದಿದೆ.

ಕಳಪೆ-ಉತ್ತಮ ಯಾರು ಎಂಬ ಬಗ್ಗೆ ಮನೆಯ ಸದಸ್ಯರ ಅಭಿಪ್ರಾಯ ಏನು ಎಂಬುದರ ಕುರಿತು ಜಿಯೊ ಸಿನಿಮಾ ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಸುಳಿವು ನೀಡಿದೆ.

ಕಾರ್ತಿಕ್ ಅವರು ವರ್ತೂರು ಸಂತೋಷ್ ಅವರಿಗೆ ಕಳಪೆ ನೀಡಿದ್ದರೆ, ತನಿಷಾ, ಮೈಕಲ್ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಹೇಳಿದ್ದಾರೆ. ಒಟ್ಟಾರೆ ಮನೆಯ ಸದಸ್ಯರ ಬಾಯಲ್ಲಿ ಮೈಕಲ್‌ ಮತ್ತು ವರ್ತೂರು ಸಂತೋಷ್ ಹೆಸರೇ ಹೆಚ್ಚು ಸಲ ಬಂದಂತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವರ್ತೂರು, ‘ಐದು ಲಕ್ಷದ ಟಾಸ್ಕ್‌ನಲ್ಲಿ ರಿಸ್ಕ್ ತೆಗೆದುಕೊಂಡು ಆಡಿದ್ದೀನಿ.‌ ನಾನೇನೂ ಸ್ಫೋರ್ಟ್ಸ್ ಫೀಲ್ಡ್‌ನಿಂದ ಬಂದವನಲ್ಲ, ಆದರೆ ಎತ್ತು, ದನಗಳನ್ನು ಪರಿಗಣಿಸಿದರೆ ಸ್ಫೋರ್ಟ್ಸ್ ಹುಟ್ಟುಹಾಕಿದ್ದೇ ನಾವು’ ಎಂದು ಖಾರವಾಗಿ ತಿರುಗೇಟು ಕೊಟ್ಟಿದ್ದಾರೆ.

ಒಟ್ಟಾರೆ ಈ ವಾರದ ಕಳಪೆ ಯಾರು ಮತ್ತು ಉತ್ತಮ ಯಾರು ಎಂಬುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT