ಬಿಗ್ ಬಾಸ್ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆಯಲ್ಲಿ ಹನುಮಂತ ಗೆದಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ಬಿಗ್ಬಾಸ್ ಟ್ರೋಫಿ ಯಾರ ಮುಡಿಗೇರಲಿದೆ ಎಂಬ ಕುತೂಲಹಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ.

ರನ್ನರ್ ಅಪ್ ಆಗಿ ತ್ರಿವಿಕ್ರಮ್ ಹೊರಹೊಮ್ಮಿದ್ದಾರೆ.

ಶನಿವಾರ ನಡೆದ ಸಂಚಿಕೆಯಲ್ಲಿ ಭವ್ಯಗೌಡ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದರು. ಫಿನಾಲೆ ದಿನಕ್ಕೆ ಉಗ್ರಂ ಮಂಜು, ರಜತ್, ಮೋಕ್ಷಿತಾ ಪೈ, ತ್ರಿವಿಕ್ರಮ್, ಹನುಮಂತ ಪ್ರವೇಶಿಸಿದ್ದರು.

ಭಾನುವಾರ ನಡೆದ ಸಂಚಿಕೆಯಲ್ಲಿ ಉಗ್ರಂ ಮಂಜು, ರಜತ್, ಮೋಕ್ಷಿತಾ ಪೈ ಹೊರ ಹೋದರು. ಅಂತಿಮವಾಗಿ ತ್ರಿವಿಕ್ರಮ್ ಮತ್ತು ಹನುಮಂತನ ನಡುವೆ ಪೈಪೋಟಿ ಜೋರಾಗಿತ್ತು.

ಹನುಮಂತ ಟ್ರೋಫಿಯೊಂದಿಗೆ ₹50 ಲಕ್ಷ ತಮ್ಮದಾಗಿಸಿಕೊಂಡಿದ್ದಾರೆ.

ಹನುಮಂತ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿದ್ದಾರೆ ಎಂದು ಇಂದು ಮಧ್ಯಾಹ್ನದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿತ್ತು. ವಿನ್ನರ್ ಘೋಷಣೆಗೂ ಮೊದಲೇ ಮಾಹಿತಿ ಸೋರಿಕೆಯಾಗಿದೆ. ಹನುಮಂತ ಈ ಸೀಸನ್ ಗೆದ್ದಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಡಿಂಗ್ ಆಗಿತ್ತು. ಮುಗ್ಧತೆ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಹನುಮಂತ ಜನರ ಮನಸ್ಸನ್ನು ಗೆದ್ದಿದ್ದಾರೆ.

ನಟ ಕಿಚ್ಚ ಸುದೀಪ್ ಅವರು ನಡೆಸಿಕೊಟ್ಟ ಅಂತಿಮ ಬಿಗ್ಬಾಸ್ ಶೋ ಇದಾಗಿದೆ. 17 ಸ್ಪರ್ಧಿಗಳು ಭಾಗವಹಿಸಿದ್ದರು. ಸಿನಿಮಾ, ಧಾರಾವಾಹಿ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.