ಸೋಮವಾರ, ಮಾರ್ಚ್ 20, 2023
30 °C

ಮೈ ಬಣ್ಣದ ಬಗ್ಗೆ ಟ್ರೋಲ್: ಸೈಬರ್ ಪೊಲೀಸರಿಗೆ ದೂರು ನೀಡಿದ ನಟಿ ಶೃತಿ ದಾಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ತಮ್ಮ ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪದೇ ಪದೇ ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಗಾಳಿ ನಟಿ ಶೃತಿ ದಾಸ್ ಅವರು ಕೋಲ್ಕತ್ತ ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

‘ಕಳೆದ ಎರಡು ವರ್ಷದಿಂದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೈ ಬಣ್ಣದ ಬಗ್ಗೆ ಟ್ರೋಲ್ ಮಾಡುತ್ತಿದ್ದಾರೆ. ಆರಂಭದಲ್ಲಿ ಇದನ್ನು ಉಪೇಕ್ಷಿಸಿದ್ದರೂ, ಇತ್ತೀಚಿನ ದಿನಗಳಲ್ಲಿ ಇದು ಜಾಸ್ತಿ ಆಗಿದೆ. ಇದು ಸಹಿಸಿಕೊಳ್ಳಲು ಅಸಾಧ್ಯ. ಸೈಬರ್ ಪೊಲೀಸರು ಟ್ರೋಲ್ ಮಾಡಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

25 ವರ್ಷದ ಶೃತಿ ದಾಸ್ ಅವರು ಜನಪ್ರಿಯ ‘ತ್ರಿಣಯಾನಿ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಇದೀಗ ಅವರು ದೇಶರ್ ಮಾತಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಮಹಿಳೆಯರ ಬಗ್ಗೆ ನಿಂದಾನಾತ್ಮಕವಾಗಿ ಟ್ರೋಲ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮಹಿಳಾ ಆಯೋಗ ಶೃತಿ ದಾಸ್ ದೂರಿಗೆ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ಫೆಮಾ ಪ್ರಕರಣ: ನಟಿ ಯಾಮಿಗೆ ಇ.ಡಿ ನೋಟಿಸ್‌ ಜಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು