ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಅರ್ಪಿತಾಗೆ ವಿಚ್ಛೇದನ ನೀಡಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ

ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡ ನಟ
Published 19 ಆಗಸ್ಟ್ 2023, 11:13 IST
Last Updated 19 ಆಗಸ್ಟ್ 2023, 11:13 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಅವತರಣಿಕೆಯ ಬಿಗ್‌ ಬಾಸ್‌ ಶೋನ ಮಾಜಿ ಸ್ಪರ್ಧಿ ಹಾಗೂ ನಿರೂಪಕ ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ಅವರು ತಮ್ಮ ಪತ್ನಿ ಅರ್ಪಿತಾ ಅವರಿಗೆ ವಿಚ್ಛೇದನ ನೀಡಿದ್ದಾರೆ.

ಈ ವಿಷಯವನ್ನು ಕೀರ್ತಿ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ’ ಎಂದು ಕಿರಿಕ್ ಕೀರ್ತಿ ವಿಚ್ಛೇದನ ಆಗಿರುವುದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈ ಮೊದಲು ಕಿರಿಕ್ ಕೀರ್ತಿ ಹಾಗೂ ಅರ್ಪಿತಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಚರ್ಚಿಸಿದ್ದರು. ಈಗ ಈ ಬಗ್ಗೆ ಸ್ವತಃ ಕೀರ್ತಿ ಅಂತಿಮ ತೆರೆ ಎಳೆದಿದ್ದಾರೆ.

2016ರಲ್ಲಿ ಕನ್ನಡ ಬಿಗ್‌ಬಾಸ್ ಶೋನಲ್ಲಿ ಕಿರಿಕ್ ಕೀರ್ತಿ ಅವರು ರನ್ನರ್‌ಅಪ್ ಆಗಿ ಗಮನ ಸೆಳೆದಿದ್ದರು. ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT