ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK 10: ರನ್ನರ್ ಅಪ್ ಆದ ಪ್ರತಾಪ್‌, ಅವಮಾನ - ಆಕ್ರೋಶಕ್ಕೆ ಯಶಸ್ಸಿನ ಉತ್ತರ

Published 28 ಜನವರಿ 2024, 19:00 IST
Last Updated 28 ಜನವರಿ 2024, 19:00 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ 10ನೇ ಸೀಸನ್‌ನಲ್ಲಿ ಡ್ರೋನ್‌ ಪ್ರತಾಪ್‌ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ.

ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್‌ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು.

ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋನ್‌ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್‌ ಕೈ ಇತ್ತು. ಆ ಟೆನ್ಷನ್‌ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು.

ಅದರಲ್ಲಿ ಸುದೀಪ್‌ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋನ್‌ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ₹10 ಲಕ್ಷ ಬಹುಮಾನ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT