ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bigg Boss: ಕೆಂಪು ಮಣ್ಣಿನ ಕುಸ್ತಿ ಅಖಾಡದಲ್ಲಿ ಸ್ಪರ್ಧಿಗಳ ಶಕ್ತಿ ಪ್ರದರ್ಶನ

Published 2 ನವೆಂಬರ್ 2023, 7:52 IST
Last Updated 2 ನವೆಂಬರ್ 2023, 10:09 IST
ಅಕ್ಷರ ಗಾತ್ರ

ಬೆಂಗಳೂರು: ಹಳ್ಳಿ ಮನೆಯಾಗಿ ಮಿಂಚಿದ್ದ ಬಿಗ್‌ ಬಾಸ್‌ ಮನೆಯಲ್ಲೀಗ ಈಗ ಕುಸ್ತಿ ಶುರುವಾಗಿದೆ. ಕೆಂಪುಮಣ್ಣಿನ ಕುಸ್ತಿ ಅಖಾಡ ಸ್ಪರ್ಧಿಗಳ ದೈಹಿಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಈ ನಡುವೆ ಸದಸ್ಯರ ಮಾತಿನ ಶಕ್ತಿ ಪ್ರದರ್ಶನವೂ ಜೋರಾಗಿಯೇ ನಡೆಯುತ್ತಿದೆ.

ಆನೆಯಾಗಿ ಬಿಂಬಿಸಿಕೊಂಡಿದ್ದ ವಿನಯ್‌ ಮತ್ತು ಮೈಕಲ್‌ ಅಖಾಡದಲ್ಲಿ ಮುಖಾಮುಖಿಯಾಗಿದರೆ, ಸ್ನೇಹಿತ್‌ ಮತ್ತು ಕಾರ್ತಿಕ್‌ ಜಿದ್ದಾಜಿದ್ದಿಗೆ ಮುಂದಾಗಿದ್ದಾರೆ. ಅತ್ತ, ನೀತು ಮತ್ತು ಸಂಗೀತಾ ಕೂಡ ಪಂದ್ಯಕ್ಕೆ ಇಳಿದಿದ್ದಾರೆ.

ಕಳೆದ ಎರಡು ದಿನಗಳಿಂದ ಹಳ್ಳಿ ವಾತಾವರಣದಲ್ಲಿ, ಬಿಗ್‌ಬಾಸ್ ಸ್ಪರ್ಧಿಗಳು ಎರಡು ಕುಟುಂಬಗಳಾಗಿ ಬದುಕುತ್ತಿದ್ದಾರೆ. ಅವರ ನಡುವೆ ಜೋರು ಸ್ಪರ್ಧೆಯೂ ನಡೆಯುತ್ತಿದ್ದು, ಮಾತುಗಳ ಜಟಾಪಟಿ ಕೈ ಕೈ ಮಿಲಾಯಿಸುವ ಹಂತಕ್ಕೂಹೋಗುತ್ತಿದೆ.

ಜಿಯೊ ಸಿನಿಮಾದಲ್ಲಿ ದಿನದ 24 ಗಂಟೆಗಳ ಕಾಲ ನೇರ ಪ್ರಸಾರವಾಗುತ್ತಿರುವ ಬಿಗ್‌ ಬಾಸ್‌ನ ಅಖಾಡದಲ್ಲಿ ಕುಸ್ತಿ ನಡೆಯುತ್ತಿದ್ದರೆ ಹೊರಗಡೆ ತನಿಷಾ ಮತ್ತು ವಿನಯ್ ನಡುವೆ ಮಾತಿನ ಚಕಮಕಿಯೂ ಜೋರಾಗಿಯೇ ನಡೆದಿದೆ.

ಬಿಗ್‌ ಬಾಸ್‌ ಮನೆಗೆ ವಾಪಸ್‌ ಆಗಿರುವ ವರ್ತೂರು ಸಂತೋಷ್‌ ಉತ್ಸಾಹ ಕಳೆದುಕೊಂಡಂತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT