ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

BBK 10 Grand Finale: 2ನೇ ರನ್ನರ್ ಅಪ್‌ ಆಗಿ ಮನೆಯಿಂದ ಹೊರಬಂದ ಸಂಗೀತಾ ಶೃಂಗೇರಿ

Published 28 ಜನವರಿ 2024, 18:18 IST
Last Updated 28 ಜನವರಿ 2024, 18:18 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ 10ನೇ ಸೀಸನ್‌ ಎರಡನೇ ರನ್ನರ್ ಅಪ್ ಆಗಿ ಸಂಗೀತಾ ಶೃಂಗೇರಿ ಅವರು ಹೊರಹೊಮ್ಮಿದ್ದಾರೆ. ಬಿಗ್‌ಬಾಸ್ ಸೀಸನ್‌ನ ‘ಸಿಂಹಿಣಿ’ ಎಂದೇ ಪ್ರಸಿದ್ಧರಾಗಿದ್ದ ಸಂಗೀತಾ, ತಮ್ಮ ನೇರ ಮಾತು, ದಿಟ್ಟ ನಿಲುವಿನಿಂದ ಜನರ ಮೆಚ್ಚುಗೆ ಗಳಿಸಿದ್ದರು.

ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್‌ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು.

ಮುಖ್ಯವೇದಿಕೆಯಲ್ಲಿ ನಿಂತಿದ್ದ ಮೂವರು ಸ್ಪರ್ಧಿಗಳ ಮುಖದಲ್ಲಿ ಆತಂಕ ಎದ್ದು ಕಾಣಿಸುತ್ತಿತ್ತು. ಸ್ಪರ್ಧಿಗಳ ಮುಖದಲ್ಲಿಯಷ್ಟೇ ಅಲ್ಲ, ವೇದಿಕೆಯ ಪಕ್ಕ ಕೂತ ಹಿಂದಿನ ಸ್ಪರ್ಧಿಗಳು, ಎದುರಿನಲ್ಲಿನ ಪ್ರೇಕ್ಷಕರು ಎಲ್ಲರ ಮುಖದಲ್ಲಿಯೂ ಆತಂಕ ಎದ್ದು ಕಾಣಿಸುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT