ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ 85ನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಬಿಗ್ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಎಂಟ್ರಿ ಕೊಟ್ಟಿದ್ದ ಚೈತ್ರಾ ಕುಂದಾಪುರ ಹಾಗೂ ರಜತ್ ಕಿಶನ್ ಎಲಿಮಿನೆಟ್ ಆಗಿದ್ದಾರೆ.

ಅಚ್ಚರಿ ಏನೆಂದರೆ ಬಿಗ್ಬಾಸ್ ಮನೆಗೆ ಅತಿಥಿಗಳಾಗಿ ತ್ರಿವಿಕ್ರಮ್, ಚೈತ್ರಾ ಕುಂದಾಪುರ, ರಜತ್, ಮೋಕ್ಷಿತಾ ಪೈ, ಉಗ್ರಂ ಮಂಜು ಬಂದಿದ್ದರು. ಇವರಲ್ಲಿ ಮೋಕ್ಷಿತಾ ಪೈ ಹಾಗೂ ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ತಮ್ಮ ಮನೆಗೆ ವಾಪಸ್ ಆಗಿದ್ದರು. ಆದರೆ ರಜತ್ ಹಾಗೂ ಚೈತ್ರಾ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಗಳೆಂದು ಬಿಗ್ಬಾಸ್ ಮನೆಯಲ್ಲೇ ಉಳಿದುಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.
.BBK12: ಬಿಗ್ಬಾಸ್ ಮನೆಗೆ ಬರುತ್ತಿದ್ದಂತೆ ಬದಲಾಯ್ತು ಚೈತ್ರಾ ಕುಂದಾಪುರ ಅದೃಷ್ಟ. ಬಿಗ್ಬಾಸ್ ಮನೆಯಲ್ಲಿ ತಮ್ಮ ಪ್ರೇಯಸಿ ಬಗ್ಗೆ ಹೇಳಿಕೊಂಡ ‘ಕನಸುಗಾರ’ ರವಿಚಂದ್ರನ್.
ಇದೀಗ ಬಿಗ್ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದ ಚೈತ್ರಾ ಕುಂದಾಪು ಹಾಗೂ ರಜತ್ ಕಿಶನ್ ಎಲಿಮಿನೇಟ್ ಆಗಿದ್ದಾರೆ. ಈ ವಾರ ಯಾವುದೇ ವೋಟಿಂಗ್ ಲೈನ್ ತೆಗೆದಿರಲಿಲ್ಲ. ಆದರೂ ಕೂಡ ಇಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಎಲಿಮಿನೇಷನ್ಗೆ ಕಾರಣ ಏನು ಎಂಬುವುದನ್ನು ಕಿಚ್ಚ ಸುದೀಪ್ ತಿಳಿಸಿದ್ದಾರೆ.

‘ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಒಂದು ಸ್ಫೂರ್ತಿ ಬರಲಿ ಎಂಬ ಕಾರಣಕ್ಕೆ ನಾವು ಇಬ್ಬರನ್ನು ವೈಲ್ಡ್ ಕಾರ್ಡ್ ಆಗಿ ತಂದೆವು. ಆದರೆ, ಅವರು ಅತಿಥಿಗಳು ಅಷ್ಟೇ. ಮನೆಯಲ್ಲಿ ಇದ್ದಷ್ಟೂ ದಿನ ಈ ವಿಷಯವನ್ನು ಅವರು ಹೇಳಿಲ್ಲ. ಅತಿಥಿ ಎಂಬುದು ಅವರಿಗೆ ಗೊತ್ತಿದ್ದ ಕಾರಣ ಎಲ್ಲರ ಜೊತೆ ಒಳ್ಳೆಯ ರೀತಿಯಲ್ಲಿ ಇರಲು ಪ್ರಯತ್ನಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಲೇ ಇಲ್ಲ. ಚೆನ್ನಾಗಿ ಆಡಿದರು’ ಎಂದು ಸುದೀಪ್ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನು, ಈ ರೀತಿಯ ಅವಕಾಶಗಳು ಸಿಗೋದು ತುಂಬಾನೇ ಅಪರೂಪ. ಚೈತ್ರಾ ಹಾಗೂ ರಜತ್ ಇಂತಹ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.