ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK 10 | ಎಲಿಮಿನೇಟೆಡ್ ಸ್ಪರ್ಧಿಗಳ ಪ್ರಕಾರ ಈ ಸಲ ಕಪ್‌ ಗೆಲ್ಲೋದು ಯಾರು?

Published 27 ಜನವರಿ 2024, 5:32 IST
Last Updated 27 ಜನವರಿ 2024, 5:32 IST
ಅಕ್ಷರ ಗಾತ್ರ

ನೂರು ದಿನಗಳನ್ನು ಯಶಸ್ವಿಯಾಗಿ ದಾಟಿದ ಬಿಗ್‌ ಬಾಸ್‌ ಇದೀಗ ಫಿನಾಲೆ ಹಂತಕ್ಕೆ ತಲುಪಿದೆ. ಇದರ ನಡುವೆಯೇ ಈ ಸಲ ಬಿಗ್‌ಬಾಸ್ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಬಿಗ್‌ ಬಾಸ್ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಈ ವಾರಾಂತ್ಯದಲ್ಲಿ ಉತ್ತರ ಸಿಗಲಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಸದ್ಯ ಆರು ಸ್ಪರ್ಧಿಗಳು(ಸಂಗೀತಾ, ವಿನಯ್, ಕಾರ್ತಿಕ್, ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್) ಉಳಿದಿದ್ದಾರೆ. ಮಿಡ್‌ ವೀಕ್ ಎಲಿಮಿನೇಷನ್ ಕೂಡ ಇರುವುದಿಲ್ಲ ಎಂದು ಬಿಗ್‌ ಬಾಸ್‌ ಈಗಾಗಲೇ ತಿಳಿಸಿದೆ.

ಪ್ರತಿ ವಾರ ಬಿಗ್‌ ಬಾಸ್‌ ಮನೆಯಿಂದ ಹೊರ ನಡೆದ ಸ್ಪರ್ಧಿಗಳು ಜಿಯೊ ಸಿನಿಮಾ ಸಂದರ್ಶನದಲ್ಲಿ ಭಾಗವಹಿಸಿ ಮನೆಯಲ್ಲಿ ತಮಗಾದ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಈ ಸಂದರ್ಶನಗಳಲ್ಲಿ ಕೇಳಲಾಗಿದ್ದ ಒಂದು ಸಾಮಾನ್ಯ ಪ್ರಶ್ನೆ ಎಂದರೆ, ‘ಈ ಸಲ ಬಿಗ್‌ಬಾಸ್‌ ಶೋದ ಅಂತಿಮ ಹಂತದಲ್ಲಿ ಇರುವ ಐವರು ಸ್ಪರ್ಧಿಗಳು ಯಾರು?’ ಎಂಬುದಾಗಿತ್ತು.

ಈ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಅತಿ ಹೆಚ್ಚು ಬಾರಿ ಉಲ್ಲೇಖಿತರಾದವರು ಸಂಗೀತಾ ಶೃಂಗೇರಿ. ಒಟ್ಟೂ ಒಂಬತ್ತು ಜನ ಎಲಿಮಿನೇಟೆಡ್ ಸ್ಪರ್ಧಿಗಳು ಸಂಗೀತಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕಾರ್ತಿಕ್ ಮಹೇಶ್ ಮತ್ತು ತುಕಾಲಿ ಸಂತೋಷ್‌ ಅವರು ಆರು ಬಾರಿ ಉಲ್ಲೇಖಿತರಾಗಿದ್ದಾರೆ. ವಿನಯ್ ಕೂಡ ಪದೇ ಪದೇ ಉಲ್ಲೇಖಿತಗೊಂಡಿರುವ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು.

ಸಂಗೀತಾ ಶೃಂಗೇರಿ

ಅಸಮರ್ಥರಾಗಿ ಒಳಗೆ ಹೋಗಿದ್ದರೂ, ಮೊದಲ ವಾರದಿಂದಲೇ ಮನೆಯ ಸಕ್ರಿಯ ಸದಸ್ಯರಲ್ಲಿ ಒಬ್ಬರಾಗಿದ್ದರು. ನಂತರದ ದಿನಗಳಲ್ಲಿಯೂ ಟಾಸ್ಕ್‌ಗಳಲ್ಲಾಗಲಿ, ಮನೆಯ ಕೆಲಸಗಳಲ್ಲಾಗಲಿ, ಚಟುವಟಿಕೆಗಳಲ್ಲಾಗಲಿ, ನಾಮಿನೇಷನ್‌ ಪ್ರಕ್ರಿಯೆಯಲ್ಲಾಗಲಿ ಸಂಗೀತಾ ಹೆಸರು ಮುಂಚೂಣಿಯಲ್ಲಿ ಇದ್ದೇ ಇರುತ್ತಿತ್ತು. ಭಾಗ್ಯಶ್ರೀ, ನೀತು, ಸ್ನೇಹಿತ್, ಪವಿ ಪೂವಪ್ಪ, ಅವಿನಾಶ್, ಸಿರಿ, ತನಿಷಾ ನಮೃತಾ ಇವರೆಲ್ಲರೂ ಟಾಪ್‌ 5ನಲ್ಲಿ ಸಂಗೀತಾ ಇರುತ್ತಾರೆ ಎಂದು ಊಹಿಸಿದ್ದರು. ಅದರಲ್ಲಿ ತನಿಷಾ ಮತ್ತು ನಮೃತಾ ಈ ಸಲದ ಬಿಗ್‌ಬಾಸ್‌ ಅನ್ನು ಸಂಗೀತಾ ಅವರೇ ಗೆಲ್ಲಬಹುದು ಎಂದು ಊಹಿಸಿದ್ದಾರೆ.

ತುಕಾಲಿ ಸಂತೋಷ್

ರಂಜನೆ ಮತ್ತು ತಂತ್ರಗಾರಿಕೆ ಎರಡರ ಮಿಶ್ರಣದಂತಿರುವ ತುಕಾಲಿ ಸಂತೋಷ್, ತಮ್ಮ ಜಾಣತನದಿಂದಲೇ ಬಿಗ್‌ಬಾಸ್ ಮನೆಯೊಳಗೆ ಸ್ಥಾನವನ್ನು ಭದ್ರ ಮಾಡಿಕೊಳ್ಳುತ್ತ ಬಂದರು. ವರ್ತೂರು ಸಂತೋಷ್ ಜೊತೆಗಿನ ಅವರ ಸ್ನೇಹ ಸಂಬಂಧವಂತೂ ಅವರ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿತ್ತು. ನಮೃತಾ, ಮೈಕಲ್, ಸಿರಿ, ಸ್ನೇಹಿತ್, ಭಾಗ್ಯಶ್ರೀ ಮತ್ತು ನೀತು ಅವರು ತುಕಾಲಿ ಅವರನ್ನು ಟಾಪ್‌ 5ನಲ್ಲಿ ನೋಡುತ್ತೇವೆ ಎಂದು ಹೇಳಿದ್ದರು.

​ಕಾರ್ತಿಕ್ ಮಹೇಶ್‌

ಲವಲವಿಕೆಯ ವ್ಯಕ್ತಿತ್ವ, ಎಲ್ಲದರಲ್ಲಿಯೂ ಪಾಲ್ಗೊಳ್ಳುವ ಉತ್ಸಾಹ, ಸ್ನೇಹಪರ, ಭಾವುಕ ಮನಸ್ಸು ಈ ಎಲ್ಲ ಗುಣಗಳಿಂದ ಕಾರ್ತಿಕ್ ಮಹೇಶ್ ಮನೆಯ ಬಹುತೇಕ ಸದಸ್ಯರ ಮನಸಲ್ಲಿ ಸ್ಥಾನ ಪಡೆದಿದ್ದರು. ಕಾರ್ತಿಕ್ ಅವರನ್ನು ಫೇಕ್‌ ಎಂದು ಉಳಿದ ಸದಸ್ಯರು ಉಲ್ಲೇಖಿಸಿದ್ದು ತುಂಬವೇ ವಿರಳ. ತನಿಷಾ, ಮೈಕಲ್, ಪವಿ, ಸಿರಿ, ಸ್ನೇಹಿತ್, ಭಾಗ್ಯಶ್ರೀ, ನೀತು ಅವರು ಕಾರ್ತಿಕ್ ಅವರನ್ನು ಟಾಪ್ 5ನಲ್ಲಿ ನೋಡುತ್ತೇವೆ ಎಂದು ಊಹಿಸಿದ್ದರು. ತನಿಷಾ ಮತ್ತು ಸಿರಿ ಅವರು ‘ಕಾರ್ತಿಕ್ ಗೆಲ್ಲಬೇಕು’ ಎಂಬ ಆಸೆ ಇದೆ ಹೇಳಿದ್ದರು.

​ವಿನಯ್ ಗೌಡ

‘ಐ ಆಮ್ ವಿಲನ್’ ಎನ್ನುತ್ತಲೇ ಒಳಹೋದ ವಿನಯ್ ಗೌಡ ಮನೆಯೊಳಗಿನ ಹಲವರ ಪಾಲಿಗೆ ಹೀರೊ ಆಗಿದ್ದೂ ಸತ್ಯ. ಒಂದು ಹಂತದಲ್ಲಿಯಂತೂ ಸ್ವತಃ ಸುದೀಪ್‌ ಅವರೇ, ‘ನಮ್ಮ ಕಣ್ಣಿಗೆ ಒಬ್ಬರು ಮಾತ್ರ ಫಿನಾಲೆ ವೀಕ್‌ಗೆ ಹೋಗುವ ಕಂಟೆಸ್ಟೆಂಟ್ ಆಗಿ ಕಾಣಿಸುತ್ತಿದ್ದಾರೆ. ಉಳಿದವರು ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತಿರುವ ಹಾಗೆ ಕಾಣಿಸುತ್ತಿದೆ’ ಎಂದು ನೇರವಾಗಿ ಹೇಳಿದ್ದರು. ನಮ್ರತಾ, ಮೈಕಲ್, ಪವಿ, ಸ್ನೇಹಿತ್‌ ಅವರು ವಿನಯ್‌ ಅವರನ್ನು ಟಾಪ್ 5ನಲ್ಲಿ ನೋಡುತ್ತೇವೆ ಎಂದಿದ್ದರು. ಮೈಕಲ್‌, ನಮೃತಾ ಮತ್ತು ಸ್ನೇಹಿತ್ ‘ವಿನಯ್ ಗೆಲ್ಲಬೇಕು ಎಂಬುದು ನನ್ನ ಆಸೆ’ ಎಂದು ಹೇಳಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT